ಚಿಕ್ಕಮಗಳೂರು,ಜುಲೈ,1,2023(www.justkannada.in): ಜುಲೈ 3 ರಿಂದ ರಾಜ್ಯ ವಿಧಾನಸಭಾ ಅಧಿವೇಶನ ಪ್ರಾರಂಭವಾಗಲಿದ್ದು ಇದಕ್ಕೂ ಮುನ್ನ ವಿಪಕ್ಷ ನಾಯಕರ ಆಯ್ಕೆಯಾಗಬೇಕಿದೆ.
ಈ ಕುರಿತು ಚಿಕ್ಕಮಗಳೂರಿನಲ್ಲಿ ಮಾತನಾಡಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ವಿರೋಧ ಪಕ್ಷದ ನಾಯಕ ಯಾರು ಎಂದು ನಾಳೆ ಗೊತ್ತಾಗಲಿದೆ ಎಂದು ಹೇಳಿದ್ದಾರೆ.
ಮಾಜಿ ಸಚಿವ ಆರ್.ಅಶೋಕ್ ಹುಟ್ಟುಹಬ್ಬಕ್ಕಾಗಿ ಇಲ್ಲಿಗೆ ಬಂದಿದ್ದೇವೆ. ಸಮಯ ಸಿಕ್ತು, ಹಾಗಾಗಿ ಹುಟ್ಟುಹಬ್ಬ ಆಚರಿಸಲು ಬಂದಿದ್ದೇವೆ. ಹುಟ್ಟುಹಬ್ಬ ಆಚರಣೆ ಮಾಡಿ ಈಗ ವಾಪಸ್ ತೆರಳುತ್ತಿದ್ದೇವೆ ಎಂದು ಹೇಳಿದರು.
Key words: opposition leader – tomorrow-Former CM- Basavaraja Bommai.