ಚೆನ್ನೈ,ಜುಲೈ,9,2021(www.justkannada.in): ಕರ್ನಾಟಕದ ಮೇಕೆದಾಟು ಯೋಜನೆಗೆ ತಮಿಳುನಾಡು ಪದೇ ಪದೇ ಅಡ್ಡಗಾಲು ಹಾಕುತ್ತಿದೆ. ಹೌದು, ಮೇಕೆದಾಟು ಯೋಜನೆಗೆ ವಿರೋಧ ವ್ಯಕ್ತಪಡಿಸಿ ಅಲ್ಲಿನ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಜುಲೈ 12 ರಂದು ಸರ್ವಪಕ್ಷ ಸಭೆ ಕರೆದಿದ್ದಾರೆ.
ಕರ್ನಾಟಕದ ಮೇಕೆದಾಟು ಯೋಜನೆಗೆ ತಡೆ ನೀಡುವಂತೆ ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ. ಈ ಬೆನ್ನಲ್ಲೆ ಇದೀಗ ಜುಲೈ 12 ಸೋಮವಾರ ಸರ್ವಪಕ್ಷ ಸಭೆ ಕರೆದಿದ್ದು, ವಿಧಾನಸಭೆಯಲ್ಲಿ ಪ್ರಾತಿನಿಧ್ಯ ಹೊಂದಿರುವ ಎಲ್ಲ ಪಕ್ಷಗಳ ಸಮಾಲೋಚನಾ ಸಭೆ ನಡೆಸಿ ಮೇಕೆದಾಟು ಅಣೆಕಟ್ಟು ಕುರಿತು ಚರ್ಚಿಸಲಿದ್ದಾರೆ.
Key words: Opposition – mekedatu –scheme-TamilNadu -CM -Stalin, all-party- meeting