ಬೆಂಗಳೂರು,ಜುಲೈ,22,2024 (www.justkannada.in): ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಹಗರಣಕ್ಕೆ ಸಂಬಂಧಿಸಿದಂತೆ ಸದನದಲ್ಲಿ ವಿಪಕ್ಷಗಳ ಧರಣಿ ಮುಂದುವರೆದಿದೆ.
ಇಂದು ಸಹ ಸದನ ಆರಂಭವಾಗುತ್ತಿದ್ದಂತೆ ಬಿಜೆಪಿ, ಜೆಡಿಎಸ್ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಸ್ಪೀಕರ್ ಯುಟಿ ಖಾದರ್ ಪ್ರತಿಭಟನೆ ಮಾಡದಂತೆ ಮನವಿ ಮಾಡಿದ್ದಾರೆ.
ಸದನದಲ್ಲಿ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್, ವಾಲ್ಮೀಕಿ ಅಭಿವೃದ್ದಿ ನಿಗಮ ವಿಚಾರವಾಗಿ ಹೋರಾಟ ಮಾಡಿದ್ದವು. ಆದರೆ ವಾಲ್ಮೀಕಿ ಹಗರಣದ ಬಗ್ಗೆ ಸಿಎಂ ಸಿದ್ದರಾಮಯ್ಯ ಉತ್ತರಿಸಲಿಲ್ಲ. ನಮ್ಮ ಕಾಲದಲ್ಲಿ ಹಗರಣ ಆಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ನಾವು ಪಟ್ಟು ಹಿಡಿದಿದ್ದವು. ಸದನದಲ್ಲಿ ಮಾತನಾಡಿದ್ದು ಪತ್ರಿಕೆಯಲ್ಲಿ ಜಾಹೀರಾತು. ಇದು ಸರಿಯಾದ ಕ್ರಮ ಅಲ್ಲ ಎಂದರು.
Key words: Opposition party, continues,protest session, R. Ashok