ಬೆಂಗಳೂರು,ಮಾ,2,2020(www.justkannada.in): ಸ್ವಾತಂತ್ರ ಹೋರಾಟಗಾರ ದೊರೆಸ್ವಾಮಿ ಬಗ್ಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಹೇಳಿಕೆ ಖಂಡಿಸಿ ವಿಧಾನಸಭೆ ಮತ್ತು ವಿಧಾನಪರಿಷತ್ ನಲ್ಲಿ ಪ್ರತಿಪಕ್ಷದ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದ ಹಿನ್ನೆಲೆ ಉಭಯಸದನ ಕಲಾಪವನ್ನ ಮುಂದೂಡಲಾಯಿತು.
ವಿಧಾನಸಭೆ ಕಲಾಪ ಆರಂಭವಾಗುತ್ತಿದ್ದಂತೆ ವಿಪಕ್ಷ ನಾಯ ಸಿದ್ಧರಾಮಯ್ಯ ಯತ್ನಾಳ್ ಹೇಳಿಕೆ ವಿಚಾರವಾಗಿ ಚರ್ಚೆಗೆ ಆಗ್ರಹಿಸಿದರು. ಚರ್ಚೆಗೆ ಅವಕಾಶ ನೀಡದ ಹಿನ್ನೆಲೆ ಪ್ರತಿಪಕ್ಷ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು. ಗದ್ದಲ ಉಂಟಾದ ಹಿನ್ನೆಲೆ ವಿಧಾನಸಭೆ ಕಲಾಪವನ್ನ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಮುಂದೂಡಿದರು.
ಇತ್ತ ವಿಧಾನಪರಿಷತ್ ನಲ್ಲೂ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಹೇಳಿಕೆ ಖಂಡಿಸಿ ಪ್ರತಿಪಕ್ಷ ಸದಸ್ಯರು ಪ್ರತಿಭಟನೆ ನಡೆಸಿದರು. ಗದ್ದಲ ತೀವ್ರಗೊಂಡ ಹಿನ್ನೆಲೆ ವಿಧಾನ ಪರಿಷತ್ ಕಲಾಪ ಮಧ್ಯಾಹ್ನ 1 ಗಂಟೆಗೆ ಮುಂದೂಡಿಕೆ ಮಾಡಲಾಯಿತು.
Key words: Opposition party-members –protests- against –MLAs- basanagowda patil- statement-Adjournment