ಬೆಂಗಳೂರು- ಮೈಸೂರು ಹೈವೇಯಲ್ಲಿ ಟೋಲ್ ಸಂಗ್ರಹಕ್ಕೆ ವಿರೋಧ: ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಪ್ರತಿಭಟನೆ.

ಬೆಂಗಳೂರು,ಮಾರ್ಚ್,16,2023(www.justkannada.in): ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೈವೇಯಲ್ಲಿ ಸರ್ವೀಸ್ ರಸ್ತೆ ಇಲ್ಲದೆ ಟೋಲ್ ಸಂಗ್ರಹ ಮಾಡುತ್ತಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಡೆಯನ್ನ ಖಂಡಿಸಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಬೆಂಗಳೂರು ದಕ್ಷಿಣ ತಾಲ್ಲೂಕಿನ ಕಣಮಿಣಿಕೆ ಟೋಲ್ ಪ್ಲಾಜಾ ಬಳಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ನೇತೃತ್ವದಲ್ಲಿ ಜೆಡಿಎಸ್ ಕಾರ್ಯಕರ್ತರು ಟೋಲ್ ಸಂಗ್ರಹದ ವಿರುದ್ದ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಮಾಗಡಿ ಶಾಸಕ ಮಂಜುನಾಥ್ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

ಈ ವೇಳೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಸರ್ವೆಸ್ ರಸ್ತೆ ಇಲ್ಲದೆ ಟೋಲ್ ಸಂಗ್ರಹ ಮಾಡಲಾಗುತ್ತಿದೆ ಫಾಸ್ಟ್ ಟ್ಯಾಗ್ ಇದ್ದರೇ 135 ರೂ ಕಟ್ಟಬೇಕು ಫಾಸ್ಟ್ ಟ್ಯಾಗ್ ಇಲ್ಲದಿದ್ದರೇ ಡಬಲ್ ಹಣ ಕಟ್ಟಬೇಕು. 50 ಕಿಮಿ ವ್ಯಾಪ್ತಿಯಲ್ಲಿ ಆಸ್ಪತ್ರೆ ಇರಬೇಕು. ಹೈವೇಯಲ್ಲಿ ಶೌಚಾಲಯ ಇಲ್ಲ. ಹೀಗಾಗಿ ಟೋಲ್ ಸಂಗ್ರಹ ವಿರೋಧಿಸಿ ಪಕ್ಷಾತೀತವಾಗಿ ಪ್ರತಿಭಟನೆ ನಡೆಯುತ್ತಿದೆ ಎಂದು ತಿಳಿಸಿದರು.

Key words: Opposition -toll collection – Bangalore-Mysore- highway- JDS- protest