ಬೆಂಗಳೂರು, ಫೆಬ್ರವರಿ 21,2024(www.justkannada.in): ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು.ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯವಲ್ಲ ಎಂಬರ್ಥದ ಆದೇಶ ಇದಾಗಿದ್ದು ವಿವಾದ ಸೃಷ್ಠಿಸಿದೆ. ಈ ಕುರಿತು ವರದಿಯಾದ ಬೆನ್ನಲ್ಲೆ ಈ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಮಾತನಾಡಿರುವ ಅವರು, ಒಂದು ಸಣ್ಣ ಪ್ರಿಂಟ್ ಸಮಸ್ಯೆ ಆಗಿದೆ. ನಮ್ಮಗೆ ಎಲ್ಲಾ ಶಾಲೆಗಳು ಒಂದೆ. ಆದೇಶ ಮಾಡಬೇಕಾದರೆ ಸರ್ಕಾರಿ ಶಾಲೆ ಅನುದಾನಿತ ಶಾಲೆ ಅಂತ ಪ್ರಿಂಟ್ ಮಿಸ್ಟೇಕ್ ಆಗಿದೆ. ಅದು ಎಲ್ಲ ಶಾಲೆಗಳು ಅಂತ ತಿದ್ದುಪಡಿ ಮಾಡಿಸುತ್ತೇವೆ. ನಮ್ಮ ಸರ್ಕಾರಕ್ಕೆ ಕನ್ನಡ ಬಗ್ಗೆ ಕಾಳಜಿ ಇದೆ. ನಾವು ಬಹಳ ಸ್ಪಷ್ಟವಾಗಿ ಇದ್ದೇವೆ. ಆದೇಶ ಪ್ರತಿಯ ಸಾಧಕ-ಭಾದಕ ಹೇಳಬೇಕು. ಸಹಜವಾಗಿ ನೋಟ್ ಶೀಟ್ ಒಳಗಡೆ ಸಣ್ಣಪುಟ್ಟ ಸಮಸ್ಯೆ ಆಗಿದೆ ಎಂದು ತಿಳಿಸಿದರು.
ಇನ್ನು ನಾಮಫಲಕಗಳಲ್ಲಿ ಶೇ. 60 ರಷ್ಟು ಕನ್ನಡ ಕಡ್ಡಾಯ ವಿಚಾರ ಕುರಿತು ಪ್ರತಿಕ್ರಿಯಿಸಿದ ಶಿವರಾಜ್ ತಂಗಡಗಿ, ಈ ಬಗ್ಗೆ ಸದನದಲ್ಲಿ ಚರ್ಚೆ ಆಗಿದೆ. ಕೈಗಾರಿಗೆಗಳಿಗೂ ಹೆಸರು ಹಾಕುವ ಪದ್ದತಿ ಬರುತ್ತಿದೆ ಎಂದರು.
Key words: order -NaadaGeethe – not -compulsory – private schools: Minister -Shivraj Thangadagi -clarified.