ಬೆಂಗಳೂರು ,ಮೇ,14,2021(www.justkannada.in): ಕೊರೋನಾ ನಿಯಂತ್ರಣಕ್ಕಾಗಿ ಲಾಕ್ ಡೌನ್ ಜಾರಿ ಮಾಡಿರುವ ಹಿನ್ನೆಲೆ ತೊಂದರೆಗೀಡಾಗಿರುವ ಬಡವರ ಸಂಕಷ್ಟಕ್ಕೆ ನೆರವಾಗಲು ಸರ್ಕಾರ ಮುಂದೆ ಬಂದಿದ್ದು, ಮೇ 24ರವರೆಗೆ ಎಲ್ಲಾ ಇಂದಿರಾ ಕ್ಯಾಂಟಿನ್ ಗಳಲ್ಲಿ ಉಚಿತ ಊಟ ನೀಡುವಂತೆ ಆದೇಶ ಹೊರಡಿಸಿದೆ.
ಕೊರೋನಾ ಸೋಂಕಿನ ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ಮೇ.10 ರಿಂದ 24ರವರೆಗೆ ಲಾಕ್ ಡೌನ್ ಜಾರಿಗೊಳಿಸಲಾಗಿದೆ. ಈ ಸಂದರ್ಭದಲ್ಲಿ ಕೂಲಿ ಕಾರ್ಮಿಕರು, ವಲಸಿಗರು ಮತ್ತು ಇತರೇ ದುರ್ಬಲ ವರ್ಗದವರಿಗೆ ಅನಾನುಕೂಲವಾಗದಂತೆ ರಾಜ್ಯದ ನಗರ ಸ್ಥಳೀಯ ಸಂಸ್ಧೆಗಳಲ್ಲಿ ಚಾಲ್ತಿಯಲ್ಲಿರುವ ಇಂದಿರಾ ಕ್ಯಾಂಟೀನ್ ಗಳಲ್ಲಿ ಉಚಿತವಾಗಿ ಬೆಳಗಿನ ಉಪಹಾರ, ಮಧ್ಯಾಹ್ನ ಹಾಗೂ ರಾತ್ರಿ ಊಟ ಒದಗಿಸುವಂತೆ ಪೌರಾಡಳಿತ ನಿರ್ದೇಶನಾಲಯ ಆದೇಶ ಹೊರಡಿಸಿದೆ.
ಬಿಬಿಎಂಪಿ ಹೊರತು ಪಡಿಸಿ ಸ್ಥಳೀಯ ಸಂಸ್ಥೆಗಳಲ್ಲಿ ಇಂದಿರಾ ಕ್ಯಾಂಟೀನ್ ನಲ್ಲಿ ಈ ವ್ಯವಸ್ಥೆ ಚಾಲನೆಯಲ್ಲಿರಲಿದೆ. ಸಿಎಂ ಅನುಮತಿ ಪಡೆದು ಪೌರಾಡಳಿತ ಸಚಿವ ಎಂಟಿಬಿ ನಾಗರಾಜ್ ಯೋಜನೆ ಘೋಷಣೆ ಮಾಡಿದ್ದಾರೆ.
ಈ ಕುರಿತು ರಾಜ್ಯ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರು ಪತ್ರ ಬರೆದಿದ್ದಾರೆ. ಸರ್ಕಾರವು ಕೋವಿಡ್-19 ವೈರಾಣುವಿನ ಹರಡುವಿಕೆಯನ್ನು ತಡೆಗಟ್ಟಲು ಹಾಗೂ ಪ್ರಸರಣ ಸರಪಳಿಯನ್ನು ತುಂಡರಿಸಲು ರಾಜ್ಯದಲ್ಲಿ ದಿನಾಂಕ 10-05-2021 ರಿಂದ 24-05-2021ರವರೆಗೆ ಕೋವಿಡ್ 19 ನಿಯಂತ್ರಣಾ ಕ್ರಮಗಳನ್ನು ಜಾರಿಗೊಳಿಸಲಾಗಿದೆ.
ಈ ಸಂದರ್ಭದಲ್ಲಿ ಕೂಲಿ ಕಾರ್ಮಿಕರು, ವಲಸಿಗರು ಮತ್ತು ಇತರೇ ದುರ್ಬಲ ವರ್ಗದವರಿಗೆ ಅನಾನುಕೂಲವಾಗದಂತೆ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಚಾಲ್ತಿಯಲ್ಲಿರುವ ಇಂದಿರಾ ಕ್ಯಾಂಟೀನ್ ಗಳಲ್ಲಿ ಉಚಿತವಾಗಿ ಬೆಳಗಿನ ಉಪಹಾರ, ಮಧ್ಯಾಹ್ನ ಮತ್ತು ರಾತ್ರಿ ಊಟಗಳನ್ನು ಒದಗಿಸಬೇಕೆಂದು ಆದೇಶದಲ್ಲಿ ಸೂಚಿಸಿದ್ದಾರೆ.
ದಿನಾಂಕ 10-05-2021 ರಿಂದ 24-05-2021ರವರೆಗೆ ನಗರ ಸ್ಥಳೀಯ ಸಂಸ್ಥೆಗಳಲ್ಲಿರುವ(ಬಿಬಿಎಂಪಿ ಹೊರತುಪಡಿಸಿ) ಇಂದಿರಾ ಕ್ಯಾಟೀನ್ ಗಳಲ್ಲಿ ಪ್ರಚಲಿತ ಮಾರ್ಗಸೂಚಿಗಳನ್ವಯ ಉಚಿತವಾಗಿ ಬೆಳಗಿನ ಉಪಹಾರ, ಮಧ್ಯಾಹ್ನ ಮತ್ತು ರಾತ್ರಿ ಊಟಗಳನ್ನು ಒದಗಿಸಲು ಅಗತ್ಯ ಕ್ರಮವಹಿಸಲು ನಿರ್ದೇಶಿಸಿದೆ. ಈ ನಿಟ್ಟಿನಲ್ಲಿ ಆಹಾರ ಸೇವಿಸುವ ಜನರ ಸಂಖ್ಯೆ(Footfall) ವಿವರಗಳನ್ನು ಕಡ್ಡಾಯವಾಗಿ ನಿರ್ವಹಿಸುವುದು ಹಾಗೂ ಯೋಜನಾ ನಿರ್ದೇಶಕರು ಮತ್ತು ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು ಪರಿವೀಕ್ಷಣೆ ಮಾಡಬೇಕು ಎಂದು ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರು ಸೂಚಿಸಿದ್ದಾರೆ.
ENGLISH SUMMARY….
State Govt. orders to provide free meals at Indira Canteens till May 24
Bengaluru, May 14, 2021 (www.justkannada.in): The State Government today issued orders to provide free meals to the poor in Indira canteens till May 24.
Lockdown has been imposed across the state as a measure to control the pandemic resulting in financial problems for the poor labourers. Keeping in mind their problems the State Govt. has issued orders to provide free breakfast, lunch, and dinner at all the Indira canteens till May 24.
Accordingly, free meals will be available daily three times at all the Indira canteens except those located in the BBMP office premises.
Keywords: State Govt./ issues orders/ free meals three times a day/ for poor/ labourers/ daily wage workers/ Indira Canteens
Key words: Order – provide- free -meals -all Indira canteen- till- May 24