ಮೈಸೂರು, ಸೆಪ್ಟೆಂಬರ್ 28, 2020 (www.justkannada.in): ಮೈಸೂರಿನ ಕೋಟೆ ಆಂಜನೇಯ ದೇವಸ್ಥಾನದ ಬಳಿ ಪ್ರತಿಭಟನೆ ನಡೆಸುತ್ತಿದ್ದ ರೈತರು, ಕನ್ನಡ ಪರ ಹೋರಾಟಗಾರರನ್ನು ಬಂಧಿಸಲಾಗಿದೆ.
ಮೈಸೂರಿನ ಕೋಟೆ ಆಂಜನೇಯ ದೇವಾಲಯದ ಮುಂಭಾಗ ಪ್ರತಿಭಟನೆ ಸಭೆ ನಡೆಸುತ್ತಿದ್ದ ರೈತರು ಹಾಗೂ ಹಲವು ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕೋಟೆ ಆಂಜನೇಯಸ್ವಾಮಿ ದೇವಾಲಯದಿಂದ ಜಿಲ್ಲಾಧಿಕಾರಿ ಕಚೇರಿಗೆ ತೆರಳಲು ಮುಂದಾದ ಪ್ರತಿಭಟನಾಕಾರರು. ಈ ವೇಳೆ ಪ್ರತಿಭಟನಾಕಾರರನ್ನ ತಡೆದು ಕೆಎಸ್ಆರ್ಟಿಸಿ ಬಸ್ಗಳಲ್ಲಿ ಕರೆದೊಯ್ದ ಪೊಲೀಸರು. ಡಿಸಿಪಿ ಡಾ. ಪ್ರಕಾಶ್ ಗೌಡ ನೇತೃತ್ವದಲ್ಲಿ ಪ್ರತಿಭಟನಾಕಾರರ ಬಂಧಿಸಲಾಯಿತು.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ವಿವಿಧ ಘಟನೆಗಳ ಆಕ್ರೋಶ ವ್ಯಕ್ತಪಡಿಸಿದ್ದು, ಬಂಧನದ ಕ್ರಮಕ್ಕೂ ಆಕ್ರೋಶ ವ್ಯಕ್ತಪಡಿಸಿವೆ. ಪ್ರತಿಭಟನೆ ಮೇಲೆ ಮೊಬೈಲ್ ಕಮಾಂಡ್ ವಾಹನದ ಕಣ್ಗಾವಲು ಇಡಲಾಗಿದೆ.