ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾಗಿದ್ದ ಇಬ್ಬರು ಉಗ್ರರ ಮನೆ ಉಡೀಸ್

ನವದೆಹಲಿ,ಏಪ್ರಿಲ್,25,2025 (www.justkannada.in): ಪಹಲ್ಗಾಮ್ ನಲ್ಲಿ ನಡೆದ ಪ್ರವಾಸಿಗರ ಮೇಲೆ ನಡೆದಿದ್ದ ಉಗ್ರರ ದಾಳಿಯಲ್ಲಿ ಭಾಗಿಯಾಗಿದ್ದ ಇಬ್ಬರು ಲಷ್ಕರ್-ಎ-ತೈಬಾ (ಎಲ್‌ಇಟಿ) ಭಯೋತ್ಪಾದಕರಾದ ಆದಿಲ್ ಹುಸೇನ್ ಥೋಕರ್ ಮತ್ತು ಆಸಿಫ್ ಶೇಖ್ ಅವರ ಮನೆಗಳನ್ನು ಧ್ವಂಸ ಮಾಡಲಾಗಿದೆ.

ನಿನ್ನೆ ರಾತ್ರಿ ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕ ಸ್ಫೋಟಗಳಲ್ಲಿ ಉಗ್ರ ಆದಿಲ್ ಹುಸೇನ್ ಥೋಕರ್ ಮತ್ತು ಆಸಿಫ್ ಶೇಖ್ ಅವರ ಮನೆಗಳನ್ನು ನಾಶಪಡಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಅನಂತ್ನ ನಾಗ್ ಜಿಲ್ಲೆಯ ಆದಿಲ್ ಹುಸೇನ್  ಥೋಕರ್ ಪಹಲ್ಗಾಮ್ ದಾಳಿಯ ಪ್ರಮುಖ ಆರೋಪಿಗಳಲ್ಲಿ ಒಬ್ಬನಾಗಿದ್ದರೆ, ಪುಲ್ವಾಮಾ ನಿವಾಸಿ ಶೇಖ್ ದಾಳಿಯ ಪಿತೂರಿಯಲ್ಲಿ ಭಾಗಿಯಾಗಿದ್ದಾನೆ ಎಂದು ಶಂಕಿಸಲಾಗಿದೆ.

ಇಬ್ಬರ ಮನೆಗಳಲ್ಲಿ ಸ್ಫೋಟಕಗಳನ್ನು ಇರಿಸಲಾಗಿತ್ತು ಎಂದು ಮೂಲಗಳು ತಿಳಿಸಿವೆ.  ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾಗಿದ್ದಾರೆ ಎಂದು ಶಂಕಿಸಲಾದ ಥೋಕರ್ ಮತ್ತು ಇತರ ಇಬ್ಬರು ಭಯೋತ್ಪಾದಕರ ರೇಖಾಚಿತ್ರಗಳನ್ನು  ಪೊಲೀಸರು  ಬಿಡುಗಡೆ ಮಾಡಿದ್ದರು.

Key words: two, terrorists, house,  Pahalgam attack