ಬೆಂಗಳೂರು, ಅಕ್ಟೋಬರ್, 5,2024 (www.justkannada.in): ಇತ್ತೀಚೆಗೆ ಬೆಂಗಳೂರಿನಲ್ಲಿ ಪಾಕ್ ಪ್ರಜೆಗಳ ಬಂಧನ ವಿಚಾರ ಸಂಬಂಧ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ. ಜಿ.ಪರಮೇಶ್ವರ್, ಪಾಕಿಸ್ತಾನ ಪ್ರಜೆ ಸೇರಿದಂತೆ ವಿದೇಶಿಗರು ಬೆಂಗಳೂರಿಗೆ ಬಂದು ಪಾಸ್ಪೋರ್ಟ್ ಮಾಡಿಕೊಳ್ಳುತ್ತಾರೆ ಎಂದರೆ ಇದು ಕೇಂದ್ರ ಗುಪ್ತಚರ ಇಲಾಖೆ ವಿಫಲತೆ ಎಂದು ಟೀಕಿಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಾ.ಜಿ.ಪರಮೇಶ್ವರ್, ಪಾಕಿಸ್ತಾನ ಪ್ರಜೆ ಬೆಂಗಳೂರಿನಲ್ಲಿ ವಾಸವಾಗಿರುವ ವಿಷಯ ತಿಳಿದ ಕೂಡಲೇ ನಮ್ಮ ಪೊಲೀಸರು ಅವರನ್ನು ಬಂಧಿಸಿದ್ದಾರೆ. ನಮ್ಮ ಪೊಲೀಸರು ಸಮರ್ಥರಿದ್ದಾರೆ, ಉಳಿದವರನ್ನು ಪತ್ತೆ ಹಚ್ಚುತ್ತೇವೆ ಎಂದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಡಾ.ಜಿ.ಪರಮೇಶ್ವರ್, ಸಚಿವ ಸತೀಶ್ ಜಾರಕಿಹೊಳಿ ಅವರ ಪುತ್ರಿ ಈಗ ಸಂಸದೆ. ಹೀಗಾಗಿ ಪುತ್ರಿಗೆ ಕ್ವಾರ್ಟರ್ಸ್ ಬೇಕು ಎಂಬ ಕಾರಣಕ್ಕೆ ದೆಹಲಿಗೆ ಹೋಗಿದ್ದರು. ಈ ವೇಳೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಹ ಭೇಟಿ ಮಾಡಿದ್ದಾರೆ ಎಂದರು.
ಬಿಜೆಪಿ-ಜೆಡಿಎಸ್ ನವರು ರಾಜಕಾರಣ ಮಾಡಿದರೇ ಇನ್ಮುಂದೆ ನಾವೂ ರಾಜಕಾರಣ ಮಾಡುತ್ತೇವೆ. ಮುಡಾ ಕೇಸ್ ತನಿಖೆಗೆ ಅವಕಾಶ ಮಾಡಿಕೊಡಬೇಕು. ಅದನ್ನು ಬಿಟ್ಟು ನಿತ್ಯ ರಾಜಕಾರಣ ಮಾಡಬಾರದು ಎಂದು ಕಿಡಿಕಾರಿದರು.
Key words: Pakistani, Bangalore, Central Intelligence, Department, failed, Parameshwar