ಲಾಹೋರ್,ಡಿ,17,2019(www.justkannada.in): ದೇಶದ್ರೋಹ ಪ್ರಕರಣದಡಿ ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಗೆ ಗಲ್ಲುಶಿಕ್ಷೆ ವಿಧಿಸಿ ಪಾಕಿಸ್ಥಾನ ವಿಶೇಷ ಕೋರ್ಟ್ ತೀರ್ಪು ನೀಡಿದೆ.
2007ರಲ್ಲಿ ಪಾಕ್ ಅಧ್ಯಕ್ಷರಾಗಿದ್ದ ಪರ್ವೇಜ್ ಮುಷರಫ್ ಅಂದು ಪಾಕ್ ನಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದ್ದರು. ನಂತರ ಬಂದ ನವಾಜ್ ಷರೀಫ್ ನೇತೃತ್ವದ ಸರ್ಕಾರ, ಮುಷರಫ್ ವಿರುದ್ಧ ದೇಶದ್ರೋಹದ ಆರೋಪ ಹೊರಿಸಿ 2013ರಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಿತ್ತು. ಈ ಸಂಬಂಧ ಇದೀಗ ಪಾಕಿಸ್ತಾನದ ಮಾಜಿ ಅಧ್ಯಕ್ಷ ಜ.ಪರ್ವೇಜ್ ಮುಷರಫ್ ಗೆ ಪಾಕ್ ವಿಶೇಷ ಕೋರ್ಟ್ ಮರಣದಂಡನೆ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
2016ರರಲ್ಲೇ ಪರ್ವೇಜ್ ಮುಷರಫ್ ಪಾಕಿಸ್ತಾನ ಬಿಟ್ಟಿದ್ದು ಇದೀಗ ದುಬೈನಲ್ಲಿ ವಾಸವಿದ್ದಾರೆ ಎಂದು ಹೇಳಲಾಗುತ್ತಿದೆ.
Key words: Pakistani-former President- Pervez Musharraf -sentenced to death