ಪಂಚಮಸಾಲಿ ಹೋರಾಟ: ಸುವರ್ಣಸೌಧಕ್ಕೆ ಮುತ್ತಿಗೆಗೆ ಯತ್ನ :ಲಾಠಿಚಾರ್ಜ್

ಬೆಳಗಾವಿ,ಡಿಸೆಂಬರ್,10,2024 (www.justkannada.in): ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗಾಗಿ ನಡೆಸುತ್ತಿರುವ ಹೋರಾಟ ತೀವ್ರಗೊಂಡಿದ್ದು, ಪೊಲೀಸರ ಭದ್ರತೆ ನಡುವೆಯೂ ಬೆಳಗಾವಿಯ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ.

ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ನಡೆಯುತ್ತಿರುವ  ಪಂಚಮಸಾಲಿ ಹೋರಾಟ ಇಂದು ತೀವ್ರ ಸ್ವರೂಪ ಪಡೆದಿದ್ದು ಪ್ರತಿಭಟನಾಕಾರರು ಬ್ಯಾರಿಕೇಡ್  ತಳ್ಳಿ ಸುವರ್ಣಸೌಧದಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಲಾಠಿಪ್ರಹಾರ ನಡೆಸಿದ್ದು 20ಮಂದಿಗೆ ಗಾಯಗಳಾಗಿವೆ.

ಪ್ರತಿಭಟನಾಕಾರರನ್ನ ಚದುರಿಸಲು ಸ್ವತಃ ಕಾನೂನು ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ ಅವರೇ ಲಾಠಿಚಾರ್ಜ್ ನಡೆಸಿದರು. ಲಾಠಿಚಾರ್ಜ್ ನಡೆದರೂ ಸಹ ಪ್ರತಿಭಟನಾಕಾರರು ಅದನ್ನ ಲೆಕ್ಕಿಸದೇ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.

Key words: Panchamasali, protest, Suvarna Soudha,  Lathicharge