Paris Olympics: ಭಾರತಕ್ಕೆ ಮೊದಲ ಪದಕ: ಕಂಚು ಗೆದ್ದ ಮನು ಭಾಕರ್

 

ಪ್ಯಾರಿಸ್,ಜುಲೈ,28,2024 (www.justkannada.in): 33ನೇ ಆವೃತ್ತಿಯ ಪ್ಯಾರಿಸ್ ಒಲಿಂಪಿಕ್ಸ್​ನ ಎರಡನೇ ದಿನ ಭಾರತ ಮೊದಲ ಪದಕವನ್ನ ಬೇಟೆಯಾಡಿದ್ದು, ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಭಾರತದ ಶೂಟರ್ ಮನು ಭಾಕರ್ ಕಂಚಿನ ಪದಕ ಗೆದ್ದಿದ್ದಾರೆ.

ಈ ಮೂಲಕ ಶೂಟಿಂಗ್‌ನಲ್ಲಿ ಭಾರತಕ್ಕೆ ಒಲಿಂಪಿಕ್ ಪದಕ ಗೆದ್ದ ಮೊದಲ ಭಾರತೀಯ ಮಹಿಳಾ ಶೂಟರ್ ಎಂಬ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯ ಫೈನಲ್‌ನಲ್ಲಿ 221.7 ಪಾಯಿಂಟ್‌ ಗಳನ್ನು ಸಂಪಾಧಿಸಿದ ಮನು ಭಾಕರ್ ಮೂರನೇ ಸ್ಥಾನ ಪಡೆದು ಕಂಚಿನ ಪದಕಕ್ಕೆ ಮುತ್ತಿಕ್ಕಿದರು.

ಕೊರಿಯಾದ ಓಹ್ ಯೆ ಜಿನ್ 243.2 ಅಂಕಗಳೊಂದಿಗೆ ಮೊದಲ ಸ್ಥಾನ ಪಡೆದು ಚಿನ್ನದ ಪದಕ ಗೆದ್ದರೆ 241.3 ಅಂಕ ಗಳಿಸಿದ ಕೊರಿಯಾದ ಮತ್ತೊಬ್ಬ ಸ್ಪರ್ಧಿ ಕೊರಿಯಾದ ಕಿಮ್ ಯೆಜಿ ಬೆಳ್ಳಿ ಪದಕಕ್ಕೆ ಮುತ್ತಿಕ್ಕಿದರು.

Key words: Paris Olympics,  India, Manu Bhakar, bronze