ನವದೆಹಲಿ,ಜುಲೈ,15,2022(www.justkannada.in): ಜುಲೈ 18ರಿಂದ ಸಂಸತ್ ಅಧಿವೇಶನ ಆರಂಭಗೊಳ್ಳಲಿದ್ದು, ಈ ನಡುವೆ ಸಂಸತ್ ಭವನದ ಆವರಣದಲ್ಲಿ ಮುಷ್ಕರ, ಧರಣಿ, ಸತ್ಯಾಗ್ರಹ ನಡೆಸುವಂತಿಲ್ಲ ಎಂದು ರಾಜ್ಯಸಭಾ ರಾಜ್ಯಸಭೆ ಪ್ರಧಾನ ಕಾರ್ಯದರ್ಶಿ ಪಿ. ಸಿ ಮೋದಿ ಆದೇಶ ಹೊರಡಿಸಿದ್ದಾರೆ.
ಜುಲೈ 18 ರಿಂದ ಆರಂಭವಾಗಲಿರುವ ಸಂಸತ್ತಿನ ಮುಂಗಾರು ಅಧಿವೇಶನದ ಹಿನ್ನೆಲೆಯಲ್ಲಿ ರಾಜ್ಯಸಭಾ ಸೆಕ್ರೆಟರಿ ಜನರಲ್ ಪಿ. ಸಿ ಮೋದಿ ಈ ಆದೇಶ ಹೊರಡಿಸಿದ್ದಾರೆ. ಸದಸ್ಯರು ಸಂಸತ್ ಭವನದ ಆವರಣವನ್ನು ಯಾವುದೇ ರೀತಿಯ ಪ್ರದರ್ಶನ, ಧರಣಿ, ಮುಷ್ಕರ, ಸತ್ಯಾಗ್ರಹ ನಡೆಸುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಈ ಆದೇಶವನ್ನು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯಸಭೆ ಮುಖ್ಯ ವಿಪ್ ಜೈರಾಂ ರಮೇಶ್ ತಮ್ಮ ಟ್ವೀಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಲಾಪದ ಸಂದರ್ಭದಲ್ಲಿ ಕೆಲವೊಂದು ಪದಗಳಿಗೆ ನಿರ್ಬಂಧ ವಿಧಿಸಿ ನಿನ್ನೆ ಅಸಂಸದೀಯ ಪದಗಳ ಪಟ್ಟಿ ಬಿಡುಗಡೆ ಮಾಡಲಾಗಿತ್ತು.
Key words: Parliament-session -July 18-Satyagraha-protest