ನ.25ರಿಂದ ಸಂಸತ್ ಚಳಿಗಾಲದ ಅಧಿವೇಶನ ಆರಂಭ

ನವದೆಹಲಿ, ನವೆಂಬರ್,5,2024 (www.justkannada.in): ನವೆಂಬರ್ 25 ರಿಂದ ಡಿಸೆಂಬರ್ 20ರವರೆಗೆ ಸಂಸತ್ ಚಳಿಗಾಲದ ಅಧಿವೇಶನ ನಡೆಯಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್‌ ರಿಜಿಜು ತಿಳಿಸಿದ್ದಾರೆ.

ಚಳಿಗಾಲದ ಅಧಿವೇಶನದ ವೇಳಾಪಟ್ಟಿಯನ್ನು ಪ್ರಕಟಿಸಿದ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ನವೆಂಬರ್ 26ರಂದು ಸಂವಿಧಾನ ಸದನದ ಸೆಂಟ್ರಲ್ ಹಾಲ್‌ನಲ್ಲಿ ಸಂವಿಧಾನ ದಿನವನ್ನು ಆಚರಿಸಲಾಗುವುದು ಎಂದು ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ‘ಸಂಸತ್ತಿನ ಅಧಿವೇಶನವನ್ನು ನವೆಂಬರ್ 25ರಿಂದ ಡಿಸೆಂಬರ್ 20ರವರೆಗೆ ನಡೆಸಲಾಗುವುದು. ನವೆಂಬರ್ 26 ರಂದು ಸಂವಿಧಾನ ದಿನವಾಗಿದ್ದು, ಭಾರತ ಸಂವಿಧಾನವನ್ನು ಅಳವಡಿಸಿಕೊಂಡು 75 ವರ್ಷಗಳು ಪೂರ್ಣಗೊಂಡ ಈ ಸಂದರ್ಭದಲ್ಲಿ ಸಂವಿಧಾನ ಸದನದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ’ ಎಂದು ತಿಳಿಸಿದ್ದಾರೆ.

ಈ ಬಾರಿಯ ಅಧಿವೇಶನದಲ್ಲಿ ಕೇಂದ್ರ ಸರ್ಕಾರವು ಒಂದು ರಾಷ್ಟ್ರ ಒಂದು ಚುನಾವಣಾ ಮಸೂದೆಯನ್ನು ಪರಿಚಯಿಸುವ ಸಾಧ್ಯತೆಯಿದೆ. ಇತ್ತೀಚೆಗೆ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಒಂದು ರಾಷ್ಟ್ರ ಒಂದು ಚುನಾವಣೆ ಜಾರಿ ಮಾಡಲಾಗುತ್ತದೆ ಎಂದು ಹೇಳಿದ್ದರು.

Key words: Parliament, winter session, Nov 25