ನವದೆಹಲಿ,ಡಿಸೆಂಬರ್,7,2022(www.justkannada.in): ಇಂದಿನಿಂದ ಸಂಸತ್ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, 17 ದಿನಗಳ ಕಾಲ ನಡೆಯಲಿದೆ.
ಇಂದಿನಿಂದ ಡಿಸೆಂಬರ್ 29ರ ವರೆಗೆ ಅಧಿವೇಶನ ನಡೆಯಲಿದ್ದು, ಒಟ್ಟು 16 ಮಸೂದೆಗಳನ್ನು ಮಂಡಿಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ. ಈ ಮಧ್ಯೆ ಬೆಲೆ ಏರಿಕೆ, ನಿರುದ್ಯೋಗ ಸೇರಿದಂತೆ ವಿವಿಧ ವಿಷಯಗಳನ್ನು ಮುಂದಿಟ್ಟುಕೊಂಡು ಕೇಂದ್ರ ಸರ್ಕಾರದ ವಿರುದ್ಧ ಮುಗಿಬೀಳಲು ವಿರೋಧ ಪಕ್ಷಗಳು ಸಜ್ಜಾಗಿವೆ.
ಸಂಸತ್ ಭವನದ ಬಳಿ ಮಾತನಾಡಿದ ಪ್ರಧಾನಿ ಮೋದಿ, ಅಧಿವೇಶನದಲ್ಲಿ ಎಲ್ಲಾ ಸಂಸದರು ಭಾಗವಹಿಸಿ. ಅಭಿವೃದ್ಧಿ ವಿಷಯಗಳ ಬಗ್ಗೆ ಚರ್ಚೆ ಮಾಡೋಣ. ಪ್ರತಿಪಕ್ಷದ ನಾಯಕರಿಗೂ ಅವಕಾಶ ನೀಡಲಾಗುತ್ತದೆ. ಸುಗಮ ಕಲಾಪಕ್ಕೆ ಎಲ್ಲರೂ ಸಹಕರಿಸಿ ಎಂದು ಮನವಿ ಮಾಡಿದರು.
Key words: Parliament -winter -session – today-pm -Modi