ಬೆಂಗಳೂರು, ಡಿಸೆಂಬರ್,17,2024 (www.justkannada.in): ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಆರು ತಿಂಗಳಿನಿಂದ ಜೈಲುವಾಸ ಅನುಭವಿಸುತ್ತಿದ್ದ ಮೊದಲ ಆರೋಪಿ ಪವಿತ್ರಾ ಗೌಡ ಇಂದು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾಗಿದ್ದಾರೆ.
ಹೈಕೋರ್ಟ್ನಿಂದ ಜಾಮೀನು ಮಂಜೂರಾದ ಹಿನ್ನೆಲೆಯಲ್ಲಿ ಇಂದು ಜೈಲಿನಿಂದ ಪವಿತ್ರಾ ಗೌಡ ಬಿಡುಗಡೆಯಾಗಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ , ಪವಿತ್ರಗೌಡ ಸೇರಿ 7 ಮಂದಿಗೆ ಹೈಕೋರ್ಟ್ ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಜಾಮೀನು ಮಂಜೂರು ಮಾಡಿತ್ತು.
ಪ್ರಕರಣದಲ್ಲಿ ಎ2 ಆರೋಪಿಯಾಗಿರುವ ನಟ ದರ್ಶನ್ ಅನಾರೋಗ್ಯ ಹಿನ್ನೆಲೆಯಲ್ಲಿ ಮಧ್ಯಂತರ ಜಾಮೀನು ಪಡೆದು ಹೊರಬಂದಿದ್ದರು. ಇದೀಗ ಪೂರ್ಣ ಪ್ರಮಾಣದ ಜಾಮೀನು ಸಿಕ್ಕಿದೆ.
Key words: Pavitra Gowda, released, jail ,after, six months