ಆಂಧ್ರಪ್ರದೇಶ,ಮಾರ್ಚ್,15,2025 (www.justkannada.in): ಆರ್ಥಿಕ ಲಾಭಕ್ಕಾಗಿ ತಮ್ಮ ಸಿನಿಮಾಗಳನ್ನು ಹಿಂದಿಗೆ ಡಬ್ ಮಾಡಲು ಅವಕಾಶ ನೀಡುವ ತಮಿಳುನಾಡಿನ ರಾಜಕಾರಣಿಗಳು ಹಿಂದಿ ಭಾಷೆಯನ್ನು ಏಕೆ ವಿರೋಧಿಸುತ್ತಾರೆ? ಎಂದು ಪ್ರಶ್ನಿಸುವ ಮೂಲಕ ಆಂಧ್ರ ಪ್ರದೇಶ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಗೆ ಟಾಂಗ್ ಕೊಟ್ಟಿದ್ದಾರೆ.
ತಮಿಳುನಾಡು ಸರ್ಕಾರ ಹಿಂದಿ ಹೇರಿಕೆಯನ್ನು ವಿರೋಧಿಸುತ್ತಾ ಬಂದಿದ್ದು, ಮೊನ್ನೆ ಬಜೆಟ್ ನಲ್ಲಿ ಹಿಂದಿ ಚಿಹ್ನೆಯ ರೂಪಾಯಿ ಬದಲು ತಮಿಳು ಭಾಷೆಯ ರೂಪಾಯಿ ಪದ ಬಳಕೆ ಮಾಡಿ ಈ ಮೂಲಕ ಹಿಂದಿ ಹೇರಿಕೆ ವಿರೋಧ ವ್ಯಕ್ತಪಡಿಸಿದ್ದರು.
ಕೇಂದ್ರ ಸರ್ಕಾರವು ತ್ರಿಭಾಷಾ ನೀತಿಯ (NEP) ಮೂಲಕ ಹಿಂದಿ ಹೇರಿಕೆಗೆ ಪ್ರಯತ್ನಿಸುತ್ತಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಇತ್ತೀಚೆಗೆ ಆರೋಪಿಸಿದ್ದರು. ಈ ಬಗ್ಗೆ ಆಂಧ್ರ ಪ್ರದೇಶ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಪ್ರತಿಕ್ರಿಯಿಸಿದ್ದು, ಈ ನಾಯಕರು ಹಿಂದಿಯನ್ನು ವಿರೋಧಿಸುತ್ತಾರೆ. ಆದರೆ, ಆರ್ಥಿಕ ಲಾಭಕ್ಕಾಗಿ ತಮಿಳು ಚಲನಚಿತ್ರಗಳನ್ನು ಹಿಂದಿಗೆ ಡಬ್ ಮಾಡುತ್ತಾರೆ’ ಎಂದು ಟೀಕಿಸಿದ್ದಾರೆ.
‘ಕೆಲವರು ಸಂಸ್ಕೃತ, ಹಿಂದಿಯನ್ನು ಏಕೆ ಟೀಕಿಸುತ್ತಾರೆ ಗೊತ್ತಿಲ್ಲ. ಆರ್ಥಿಕ ಲಾಭಕ್ಕಾಗಿ ತಮ್ಮ ಸಿನಿಮಾಗಳನ್ನು ಹಿಂದಿಗೆ ಡಬ್ ಮಾಡಲು ಅವಕಾಶ ನೀಡುವ ತಮಿಳುನಾಡಿನ ರಾಜಕಾರಣಿಗಳು ಹಿಂದಿ ಭಾಷೆಯನ್ನು ಏಕೆ ವಿರೋಧಿಸುತ್ತಾರೆ? ಅವರು ಬಾಲಿವುಡ್ನಿಂದ ಹಣ ಮಾಡಲು ಬಯಸುತ್ತಾರೆ. ಆದರೆ, ಹಿಂದಿಯನ್ನು ಸ್ವೀಕರಿಸಲು ನಿರಾಕರಿಸುತ್ತಾರೆ, ಇದು ಯಾವ ರೀತಿಯ ತರ್ಕ’ ಎಂದಿದ್ದಾರೆ
‘ತಮಿಳು ಸೇರಿದಂತೆ ಭಾರತಕ್ಕೆ ಎಲ್ಲಾ ಭಾಷೆಗಳು ಬೇಕು. ಯಾವುದೋ ಎರಡು ಭಾಷೆ ಮಾತ್ರ ಸಾಕಾಗಲ್ಲ. ನಾವು ಭಾಷಾ ವೈವಿಧ್ಯತೆಯನ್ನು ಅಳವಡಿಸಿಕೊಳ್ಳಬೇಕು ಎಂದು ಪವನ್ ಕಲ್ಯಾಣ್ ತಿಳಿಸಿದ್ದಾರೆ.
Key words: Pawan Kalyan, Tamil Nadu, CM, Stalin, Hindi language