ಬೆಂಗಳೂರು,ಜನವರಿ,24,2025 (www.justkannada.in): 20 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮಪಂಚಾಯತಿ ಅಭಿವೃದ್ಧಿ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ಬೇಗೂರು ಗ್ರಾಮ ಪಂಚಾಯಿತಿ ಪಿಡಿಒ ಶೋಭಾರಾಣಿ ಲೋಕಾಯುಕ್ತ ಬಲೆಗೆ ಬಿದ್ದವರು.
ಜಮೀನು ಖಾತೆ ಸಂಬಂಧ ರಮೇಶ್ ಎಂಬುವವರ ಬಳಿ ಪಿಡಿಒ ಶೋಭಾರಾಣಿ 20 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದರು ಬ್ರೋಕರ್ ರುದ್ರಪ್ಪ ಎಂಬುವವರ ಮೂಲಕ ಶೋಭಾರಾಣಿ ಲಂಚಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ವಶಕ್ಕೆ ಪಡೆದಿದ್ದಾರೆ.
Key words: PDO, Lokayukta, trap, bribe