ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಪ್ರಭಾರ PDO

ಮಂಡ್ಯ, ಜನವರಿ, 28, 2025 (www.justkannada.in):  ಲಂಚ ಸ್ವೀಕರಿಸುತ್ತಿದ್ದ ವೇಳೆ ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಕೆ.ಶೆಟ್ಟಹಳ್ಳಿ ಗ್ರಾಮ ಪಂಚಾಯತಿ ಪ್ರಭಾರ ಪಿಡಿಒ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಕೆ.ಶೆಟ್ಟಹಳ್ಳಿ ಪ್ರಭಾರ ಪಿಡಿಒ  ದಯಾನಂದ್ ಲೋಕಾಯುಕ್ತ ಬಲೆಗೆ ಬಿದ್ದವರು. ಇ-ಖಾತೆ ಮಾಡಿಸಿಕೊಡಲು ಅಶ್ವಥ್ ಎಂಬುವವರ ಬಳಿ ದಯಾನಂದ್ 25 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಇದೀಗ 12 ಸಾವಿರ ಹಣ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಲೋಕಾಯುಕ್ತ ಎಸ್ಪಿ ಸುರೇಶ್ ಬಾಬು ನೇತೃತ್ವದಲ್ಲಿ ದಾಳಿಯಾಗಿದ್ದು ದಯಾನಂದ್ ಅವರನ್ನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

Key words: PDO, Lokayukta, trap, bribe