ನವದೆಹಲಿ,ಅಕ್ಟೋಬರ್,27,2021(www.justkannada.in): ಪೆಗಾಸಸ್’ ತಂತ್ರಾಂಶ ಗೂಢಾಚಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ತಜ್ಞರ ಸಮಿತಿಯನ್ನು ರಚಿಸಿ ಮಹತ್ವದ ತೀರ್ಮಾನ ಕೈಗೊಂಡಿದೆ.
ಈ ಮೂಲಕ ಸುಪ್ರೀಂ ಕೋರ್ಟ್ನಲ್ಲಿ ಕೇಂದ್ರ ಸರ್ಕಾರಕ್ಕೆ ಹಿನ್ನಡೆಯಾಗಿದೆ. ಸುಪ್ರೀಂಕೋರ್ಟ್ ನಿವೃತ್ತ ನ್ಯಾ. ನೇತೃತ್ವದ ಸಮಿತಿ ಪ್ರಕರಣದ ತನಿಖೆ ನಡೆಸಲಿದೆ. ಇದರ ವಿರುದ್ಧದ ಅರ್ಜಿ ತಿರಸ್ಕರಿಸಬೇಕೆಂಬ ಕೇಂದ್ರದ ವಾದ ಒಪ್ಪಲ್ಲ. ಸಮಿತಿ ರಚಿಸುವ ಮನವಿಗೆ ಒಪ್ಪಿಗೆ ಕೊಟ್ಟಿದ್ದೇವೆ. ಸ್ವತಂತ್ರ ಸದಸ್ಯರನ್ನು ಆಯ್ಕೆ ಮಾಡುವುದು ದೊಡ್ಡ ಸವಾಲು ಎಂದು ಸುಪ್ರೀಂಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದೆ.
ಪೆಗಾಸಸ್ ತಂತ್ರಾಂಶ ಬಳಸಿ ಗೂಢಚಾರಿಕೆ ಪ್ರಕರಣದಲ್ಲಿ ಕಾನೂನು ಎತ್ತಿ ಹಿಡಿಯುವುದೇ ನಮ್ಮ ಉದ್ದೇಶ ಎಂದು ಸಾರಿರುವ ಸುಪ್ರೀಂ ಕೋರ್ಟ್ ಈ ಪ್ರಕರಣ ಆಧುನಿಕ ತಂತ್ರಜ್ಞಾನ ಬಳಕೆಗೆ ಸಂಬಂಧಿಸಿದೆ. ಆಧುನಿಕ ತಂತ್ರಜ್ಞಾನ ಬಳಕೆ ಬಗ್ಗೆ ‘ಸುಪ್ರೀಂ’ ಪರಿಶೀಲಿಸಿದೆ. ಸಾಂವಿಧಾನಿಕ ಮೌಲ್ಯ ಎತ್ತಿ ಹಿಡಿಯಲು ನಮ್ಮ ಶ್ರಮ ಎಂದು ಸಿಜೆಐ ರಮಣ ಆದೇಶಿಸಿದ್ದಾರೆ.
Key words: Pegasus-software -spying –case- Supreme Court –Formation – experts – committee
ENGLISH SUMMARY…
Significant judgment by SC in Pegasus spyware case: Technical committee formed for investigation
New Delhi, October 27, 2021 (www.justkannada.in): The Hon’ble Supreme Court has issued orders to form a technical committee to investigate the Pegasus Spyware case.
The Government of India has taken a setback due to this judgment. The committee led by a retired Justice will conduct the investigation. The Supreme Court has written off the Govt. of India’s request to reject the case and has informed that orders have been issued to form a committee. It has also informed that it is a huge challenge to select independent members for the committee.
Stating that uplifting the law is its objective in the Pegasus Spyware case, the Supreme Court has also informed that the case involves the usage of sophisticated technology. CJI Ramana has informed that it is the effort of the bench to uphold constitutional values.
Keywords: Supreme Court/ Pegasus Spyware Case/ technical committee