ಪೆನ್ ಡ್ರೈವ್ ಹಂಚಿಕೆ ಆರೋಪ : ಮಾಜಿ ಶಾಸಕ ಪ್ರೀತಂಗೌಡಗೆ  ರಿಲೀಫ್

ಬೆಂಗಳೂರು,ಜೂನ್,28,2024 (www.justkannada.in): ಪ್ರಜ್ವಲ್ ರೇವಣ್ಣ ವಿರುದ್ದ ಲೈಂಗಿಕ ದೌರ್ಜನ್ಯ ಪ್ರಕರಣ , ಪೆನ್‌ಡ್ರೈವ್ ಹಂಚಿಕೆ ಆರೋಪದಲ್ಲಿ ಮಾಜಿ ಬಿಜೆಪಿ ಶಾಸಕ ಪ್ರೀತಂ ಗೌಡರಿಗೆ ರಿಲೀಫ್ ಸಿಕ್ಕಿದೆ.

ಪ್ರೀತಂಗೌಡ ಅವರನ್ನ ಬಂಧಿಸಿದಂತೆ ಹೈಕೋರ್ಟ್ ಪೊಲೀಸರಿಗೆ ಆದೇಶಿಸಿದೆ. ತನಿಖೆ ಮುಂದುವರಿಸಲು ಎಸ್‌ಐಟಿಗೆ ತಿಳಿಸಿದ್ದು, ವಿಚಾರಣೆಗೆ ಸಹಕರಿಸಲು ಅರ್ಜಿದಾರ ಪ್ರೀತಂ ಗೌಡಗೆ ಹೈಕೋರ್ಟ್ ಸೂಚನೆ ನೀಡಿದೆ.

ಪೆನ್ ಡ್ರೈವ್ ಹಂಚಿಕೆ ಆರೋಪದ ಮೇಲೆ ಮಾಜಿ ಶಾಸಕ ಪ್ರೀತಂ ಗೌಡ, ಸೇರಿದಂತೆ ಇತರ ಮೂವರ ವಿರುದ್ಧ ಎಸ್‌ಐಟಿ ಪ್ರಕರಣ ದಾಖಲಿಸಿತ್ತು. ಪ್ರೀತಂ ಗೌಡ ವಿರುದ್ಧ ಪೆನ್‌ಡ್ರೈವ್ ಹಂಚಿಕೆ ಆರೋಪ ಕೇಳಿ ಬಂದಿತ್ತು. ಬಂಧನ ಭೀತಿಯಲ್ಲಿ ಪ್ರೀತಂ ಗೌಡ ಅವರು ಬಂಧನದಿಂದ ರಕ್ಷಣೆ ಕೋರಿ ಹೈಕೋರ್ಟ್‌ ಮೊರೆ ಹೋಗಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್, ಪ್ರೀತಂ ಗೌಡ ವಿರುದ್ಧದ ತನಿಖೆಗೆ ತಡೆ ನೀಡಲು ನಿರಾಕರಿಸಿದೆ. ಆರೋಪಿಯ ವಿರುದ್ಧ ಎಸ್‌ಐಟಿ ತನಿಖೆ ಮುಂದುವರಿಸಬಹುದು. ವಿಚಾರಣೆಗೆ ಸಹಕರಿಸುವಂತೆ ಅರ್ಜಿದಾರ ಪ್ರೀತಂ ಗೌಡಗೆ ಸೂಚಿಸಿದೆ.

Key words: Pen drive, case, former MLA, Preethangawda, court