ಬೆಂಗಳೂರು, ಮೇ 20, 2020 (www.justkannada.in): ಪಾರ್ಕ್ ಗಳಿಗೆ ವಾಯುವಿಹಾರಿಗಳು ಲಗ್ಗೆ ಇಡುತ್ತಿರುವುದು ಅಧಿಕಾರಿಗಳಿಗೆ ಹೊಸ ತಲೆ ನೋವಾಗಿದೆ.
ಬೆಂಗಳೂರಿನ ಲಾಲ್’ಬಾಗ್, ಕಬ್ಬನ್ ಪಾರ್ಕ್ ಸೇರಿದಂತೆ ನಗರದ ಹಲವು ಉದ್ಯಾನವನಗಳಿಗೆ ಮಂಗಳವಾರ ಸಾವಿರಾರು ವಾಯುವಿಹಾರಿಗಳು ಲಗ್ಗೆಯಿಟ್ಟಿದ್ದು, ಈಗಾಗಲೇ ಕೊರೋನಾ ಸೋಂಕಿ ಹರಡದಂತೆ ಸಾಕಷ್ಟು ಕ್ರಮ ಕೈಗೊಳ್ಳುತ್ತಿರುವ ಅಧಿಕಾರಿಗಳಿಗೆ ಹೊಸ ತಲೆನೋವು ಶುರುವಾದಂತಾಗಿದೆ.
ಬೆಳಿಗ್ಗೆ 7 ಗಂಟೆಯಿಂದ 9 ಗಂಟೆಯವರೆಗೆ ಎಲ್ಲಾ ಉದ್ಯಾನವನಗಳಲ್ಲಿ ಸಾರ್ವಜನಿಕರ ಪ್ರವೇಶಕ್ಕೆ ಸರ್ಕಾರ ಅವಕಾಶ ಕಲ್ಪಿಸಿಕೊಡಲಾಗಿದೆ. ತೋಟಗಾರಿಕಾ ಇಲಾಖೆ ವ್ಯಾಪ್ತಿಯಲ್ಲಿರುವ ಲಾಲ್’ಬಾಗ್ ಮತ್ತು ಕಬ್ಬನ್ ಪಾರ್ಕ್ ಗಳಲ್ಲಿ ಕೊರೋನಾ ಸೋಂಕು ಹರಡುವುದನ್ನು ತಡೆಯಲು ಹಲವು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಆದರೆ, ಬಿಬಿಎಂಪಿ ವ್ಯಾಪ್ತಿಗೆ ಸೇರಿದ ಉದ್ಯಾನವನಗಳಲ್ಲಿ ಯಾವುದೇ ಕ್ರಮ ಕೈಗೊಳ್ಳದೇ ಇರುವುದು ಕಂಡು ಬಂದಿತ್ತು.