ಬೆಂಗಳೂರು,ಏಪ್ರಿಲ್,21,2021(www.justkannada.in): ಕೊರೋನಾ ಚೈನ್ ಲಿಂಕ್ ಮುರಿಯಲು 14 ದಿನಗಳು ಬೇಕು. ಈಗಾಗಿ ಕೊರೋನಾ ನಿಯಂತ್ರಣಕ್ಕೆ ಬಿಗಿಕ್ರಮಕ್ಕೆ ಒತ್ತು ನೀಡಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಈ ಕುರಿತು ಇಂದು ಮಾತನಾಢಿದ ಸಚಿವ ಸುಧಾಕರ್, ಕೊರೋನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ನಿನ್ನೆ ರಾತ್ರಿಯೇ ಸಿಎಸ್ ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ ರಾಜ್ಯದ ಜನರು ಕಟ್ಟು ನಿಟ್ಟಾಗಿ ನಿಯಮ ಪಾಲಿಸಬೇಕು ಎಂದು ಮನವಿ ಮಾಡಿದರು.
ಕೊರೋನಾ ಸೂಕ್ತ ಚಿಕಿತ್ಸೆ ನೀಡಲಾಗುವುದು. ಅಕ್ಸಿಜನ್, ವೆಂಟಿಲೇಟರ್, ಐಸಿಯು ಕೊರತೆಯಾಗದಂತೆ ಕ್ರಮ ಕೈಗೊಳ್ಳಲಾಗುತ್ತದೆ. ಅಗತ್ಯವಿರುವ ಕಡೆ ವೈದ್ಯಕೀಯ ಸಿಬ್ಬಂದಿ ನಿಯೋಜನೆ ಮಾಡಲಾಗುತ್ತದೆ. ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್ ಸಮಸ್ಯೆಯಾಗದಂತೆ ಕ್ರಮ ವಹಿಸಲಾಗುವುದು ಎಂದು ಸಚಿವ ಸುಧಾಕರ್ ತಿಳಿಸಿದರು.
Key words: people – state –strictly- follow –covid rule-Appeal -Minister Sudhakar.