ಮುಂಬೈ,ನವೆಂಬರ್,14,2020(www.justkannada.in): ಮಹಾರಾಷ್ಟ್ರದಲ್ಲಿ ಕೊರೋನಾ ಲಾಕ್ ಡೌನ್ ನಿಂದಾಗಿ ಬಂದ್ ಆಗಿದ್ದ ಧಾರ್ಮಿಕ ಕೇಂದ್ರಗಳನ್ನ ತೆರೆಯಲು ಮಹಾರಾಷ್ಟ್ರ ಸರ್ಕಾರ ಅನುಮತಿ ನೀಡಿದೆ.
ಈ ಕುರಿತು ಮಾತನಾಡಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಮಹಾಮಾರಿ ಕೊರೋನಾ ವೈರಸ್ ಹರಡುವುದನ್ನು ತಡೆಯಲು ಕಳೆದ ಮಾರ್ಚ್ನಲ್ಲಿ ಲಾಕ್ಡೌನ್ ಜಾರಿಗೊಳಿಸಿದ ನಂತರ ಬಂದ್ ಆಗಿದ್ದ ಧಾರ್ಮಿಕ ಪೂಜಾ ಸ್ಥಳಗಳನ್ನು ಸೋಮವಾರದಿಂದ ರಾಜ್ಯಾದ್ಯಂತ ಮತ್ತೆ ತೆರೆಯಲಿವೆ ಎಂದಿದ್ದಾರೆ.
ನವೆಂಬರ್ 16 ರಿಂದ ಮಹಾರಾಷ್ಟ್ರ ರಾಜ್ಯದಲ್ಲಿ ಎಲ್ಲಾ ಧಾರ್ಮಿಕ ಸ್ಥಳಗಳು ಮತ್ತೆ ತೆರೆಯಲಾಗುತ್ತಿದೆ. ಚರ್ಚ್ ದೇವಸ್ಥಾನ, ಮಸೀದಿ ತೆರಯಲು ಅವಕಾಶ ನೀಡಲಾಗಿದೆ. ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಕೋವಿಡ್-19 ಮಾರ್ಗಸೂಚಿಗಳನ್ನು ಪಾಲಿಸಬೇಕು ಎಂದು ಮಹಾರಾಷ್ಟ್ರ ಸರ್ಕಾರ ಆದೇಶದಲ್ಲಿ ತಿಳಿಸಿದೆ.
Key words: Permission – open- religious -centers – Maharashtra