ನವದೆಹಲಿ,ಫೆಬ್ರವರಿ,27,2023(www.justkannada.in): ಅಗ್ನಿಪಥ್ ಯೋಜನೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನ ದೆಹಲಿ ಹೈಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಅಗ್ನಿಪಥ್ ಯೋಜನೆಯ ಸಿಂಧುತ್ವವನ್ನು ದೆಹಲಿ ಹೈಕೋರ್ಟ್ ಎತ್ತಿ ಹಿಡಿದಿದೆ.
ಅರ್ಜಿಗಳನ್ನ ವಜಾಗೊಳಿಸಿದ ದೆಹಲಿ ಹೈಕೋರ್ಟ್ ಅಗ್ನಿಪಥ್ ಯೋಜನೆ ಸರಿ ಇದೆ ಎಂದು ತೀರ್ಪು ನೀಡಿದೆ. ಈ ಬಗ್ಗೆ ಮಧ್ಯಪ್ರವೇಶಿಸಲು ಯಾವುದೇ ಕಾರಣವಿಲ್ಲ ಎಂದು ಹೇಳಿದೆ.
ರಾಷ್ಟ್ರೀಯ ಹಿತಾಸಕ್ತಿ ರಕ್ಷಣೆ ಮತ್ತು ಸಶಸ್ತ್ರ ಪಡೆಗಳನ್ನು ಸುಸಜ್ಜಿತಗೊಳಿಸಲು ಅಗ್ನಿಪಥ್ ಪೂರಕವಾಗಿದೆ ಎಂದು ದೆಹಲಿ ಹೈಕೋರ್ಟ್‍ನ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಸುಬ್ರಮೋನಿಯಂ ಪ್ರಸಾದ್ ಅವರ ಪೀಠ ಅಭಿಪ್ರಾಯಪಟ್ಟಿದೆ.
Key words: petition – rejected- oppose – Agnipath- project