ಬೆಂಗಳೂರು, ಜೂನ್ 09, 2021 (www.justkannada.in): ತೈಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಜೂನ್ 11ರಂದು ದೇಶಾದ್ಯಂತ ಸಾಂಕೇತಿಕ ಪ್ರತಿಭಟನೆ ನಡೆಸಲಿದೆ.
ಹಲವು ರಾಜ್ಯಗಳಲ್ಲಿ ಪೆಟ್ರೋಲ್ ಬೆಲೆ 100 ರೂ. ಗಡಿ ದಾಟಿದೆ. ಜನ ಸಾಮಾನ್ಯರು ಪರದಾಡುತ್ತಿದ್ದಾರೆ. ಇದನ್ನು ಖಂಡಿಸಿ ಪೆಟ್ರೋಲ್ ಬಂಕ್‌ಗಳ ಮುಂದೆ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ.
ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳ ಜಿಲ್ಲೆಗಳಲ್ಲಿ ಪೆಟ್ರೋಲ್ ದರ 100 ರೂ. ಗಡಿ ದಾಟಿದೆ. ಮೇ 4 ರಿಂದ ಇದುವರೆಗೂ ಒಟ್ಟು 20 ಬಾರಿ ಪೆಟ್ರೋಲ್ ದರವನ್ನು ಏರಿಕೆಯಾಗಿದೆ,
ಬೆಂಗಳೂರು ನಗರದಲ್ಲಿ ಕಳೆದ ವರ್ಷದ ಜೂನ್ ತಿಂಗಳಿನಲ್ಲಿ ಪೆಟ್ರೋಲ್ ದರ 73.55 ಆಗಿತ್ತು. ಭಾನುವಾರ ನಗರದಲ್ಲಿ ಲೀಟರ್ ಪೆಟ್ರೋಲ್ ದರ 98.26 ಆಗಿದೆ.