ದಾವಣಗೆರೆ,ಜುಲೈ,10,2021(www.justkannada.in): ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮತ್ತು ರಾಜ್ಯಕ್ಕೆ ಬರಬೇಕಾಗಿರುವ ಜಿಎಸ್ ಟಿ ಪಾಲಿನ ಬಗ್ಗೆ ಬಿಜೆಪಿ ಸಂಸದ ಜಿ.ಎಂ ಸಿದ್ಧೇಶ್ವರ್ ಬೇಜವಾಬ್ದಾರಿ ಹೇಳಿಕೆಯನ್ನ ನೀಡಿದ್ದಾರೆ.
ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಂಸದ ಜಿ.ಎಂ ಸಿದ್ಧೇಶ್ವರ್, ಸೈಕಲ್ ನಲ್ಲಿ ಓಡಾಡಿದ್ರೆ ಒಳ್ಳೆಯ ವ್ಯಾಯಮ ಆಗುತ್ತೆ. ಇಂಧನ ಬ್ಯಾರಲ್ ರೇಟ್ ಜಾಸ್ತಿ ಇದೆ, ಪೆಟ್ರೋಲ್ ಬೆಲೆ ಜಾಸ್ತಿ ಆಗಿದೆ. ಜನ ಸೈಕಲ್ ನಲ್ಲಿ ಓಡಾಡಿದ್ರೆ ಏನ್ ಆಗುತ್ತೆ. ಒಳ್ಳೆಯ ವ್ಯಾಯಾಮ ಆಗುತ್ತೆ ಎಂದು ಸಂಸದ ಜಿ.ಎಂ. ಸಿದ್ದೇಶ್ವರ್ ಹೇಳಿದ್ದಾರೆ.
ಅಲ್ಲದೆ ಪೆಟ್ರೋಲ್ ಡೀಸೆಲ್ ರೇಟ್ ಹೆಚ್ಚಾದರೇ ಏನು ಮಾಡೋಕೆ ಆಗುತ್ತೆ. ಇವೆಲ್ಲವನ್ನೂ ಪ್ರಧಾನಿ ಮೋದಿ ನೋಡಿಕೊಳ್ತಾರೆ. ಕೋವಿಡ್ ಹೋದ ಮೇಲೆ ಪೆಟ್ರೋಲ್ ದರ ಇಳಿಸುತ್ತಾರೆ ಎಂದು ಸಂಸದ ಜಿ.ಎಂ ಸಿದ್ಧೇಶ್ವರ್ ಹೇಳಿದ್ಧಾರೆ.
ಜಿಎಸ್ಟಿ ಪಾಲು ಕರ್ನಾಟಕ ರಾಜ್ಯಕ್ಕೆ ಸಿಗ್ತಿಲ್ಲ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ಹಿನ್ನಲೆಯಲ್ಲಿ ಈ ಬಗ್ಗೆಯೂ ಬೇಜವಾಬ್ದಾರಿ ಹೇಳಿಕೆ ನೀಡಿರುವ ಸಂಸದ ಜಿ.ಎಂ ಸಿದ್ಧೇಶ್ವರ್, ಈ ಬಗ್ಗೆ ಕೇಂದ್ರ ಹಣಕಾಸು ಸಚಿರನ್ನೇ ಕೇಳಿ. ಜಿಎಸ್ಟಿ ಪಾಲಿನ ಬಗ್ಗೆ ನಮಗೇನೂ ಗೊತ್ತಿಲ್ಲ. ಕೇಂದ್ರದಲ್ಲಿ ರಾಜ್ಯದ ನಾಲ್ವರು ಸಚಿವರಿದ್ದಾರೆ. ಅವರು ಕೇಳುತ್ತಾರೆ ಎಂದು ಹೇಳಿಕೆ ನೀಡಿದರು.
Key words: petrol- diesel –price- hike – GST –davanagere-MP- GM Siddeswar