ಮೈಸೂರು,ಫೆಬ್ರವರಿ,23,2021(www.justkannada.in) : ದಿನೇ ದಿನೇ ಏರಿಕೆಯಾಗುತ್ತಿರುವ ಪೆಟ್ರೋಲ್-ಡೀಸೆಲ್ ಹಾಗೂ ಅಡುಗೆ ಅನಿಲ ದರವನ್ನು ಇಳಿಕೆ ಮಾಡುವಂತೆ ವಂತೆ ಒತ್ತಾಯಿಸಿ ಮೈಸೂರು ಹೃದಯವಂತ ಕನ್ನಡಿಗರ ಬಳಗದಿಂದ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾವಣೆಗೊಂಡ ಪ್ರತಿಭಟನಾಕಾರರು ಕೇಂದ್ರ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಕೋವಿಡ್‌ನಿಂದಾಗಿ ಇಡೀ ಮನುಕುಲವೇ ಸಂಕಷ್ಟಕ್ಕೆ ಸಿಲುಕಿದೆ. ಮಹಾಮಾರಿಯಿಂದ ಈಗಷ್ಟೇ ಚೇತರಿಸಿಕೊಳ್ಳುತ್ತಿರುವ ಸಂದರ್ಭದಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಡೀಸೆಲ್-ಪೆಟ್ರೋಲ್ ಹಾಗೂ ಅಡುಗೆ ಅನಿಲಗಳ ಬೆಲೆ ಹೆಚ್ಚಿಸುತ್ತಿವೆ. ಈ ಬೆಲೆಗಳ ಹೆಚ್ಚಳದಿಂದಾಗಿ ಜನಸಾಮಾನ್ಯರು ಆರ್ಥಿಕ ಸಂಕಷ್ಟದಿಂದ ನರಳುತ್ತಿದ್ದಾರೆ ಎಂದು ಕಿಡಿಕಾರಿದರು.
ಇಂತಹ ಸಂದರ್ಭದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿರುವುದು ಎಷ್ಟು ಸರಿ ಎಂದು ಕಿಡಿ ಕಾರಿದರು. ದೈನಂದಿನ ಜೀವನ ನಡೆಸುವುದೇ ಕಷ್ಟಕರವಾಗಿರುವಾಗ ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಗಗನ ಮುಟ್ಟಿವೆ. ಡೀಸೆಲ್ ಪೆಟ್ರೋಲ್ ಹಾಗೂ ಅಡುಗೆ ಅನಿಲ ಬೆಲೆಗಳ ಏರಿಕೆಯಿಂದಾಗಿ ಇನ್ನೂ ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ನರಳುವಂತಾಗಿದೆ ಎಂದು ಬೇಸರವ್ಯಕ್ತಪಡಿಸಿದರು.
ಕೂಡಲೇ, ಕೇಂದ್ರ ಹಾಗೂ ರಾಜ್ಯ ಸರಕಾರಗಳು ಡೀಸೆಲ್, ಪೆಟ್ರೋಲ್ ಹಾಗೂ ಅಡುಗೆ ಅನಿಲ ಹಾಗೂ ಅಗತ್ಯ ವಸ್ತುಗಳ ಬೆಲೆಗಳನ್ನು ಇಳಿಸಬೇಕೆಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಮಹಿಳಾ ಅಧ್ಯಕ್ಷೆ ಯಶೋಧ, ಉಪಾಧ್ಯಕ್ಷ ಮಲ್ಲೇಶ್, ಕಾರ್ಯದರ್ಶಿ ಸತೀಶ್ ಕುಮಾರ್, ಸಂಸ್ಥಾಪಕ ಅಧ್ಯಕ್ಷ ಡಿ.ಪಿ.ಕೆ.ಪರಮೇಶ್ ಸೇರಿದಂತೆ ಹಲವರು ಭಾಗವಹಿಸಿದ್ದರು.
key words : Petrol-Diesel-Cooking-gas rate-decrease-Protest-demanding