ಬೆಂಗಳೂರು,ಅಕ್ಟೋಬರ್,18,2021(www.justkannada.in): ಎಡಿಜಿಪಿ ಅಲೋಕ್ ಕುಮಾರ್ ವಿರುದ್ಧ ಪೋನ್ ಟ್ಯಾಪಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಸಲ್ಲಿಸಿದ ಬಿ ರಿಪೋರ್ಟ್ ತಿರಸ್ಕರಿಸಿದ ಸಿಬಿಐ ವಿಶೇಷ ಕೋರ್ಟ್, ಮತ್ತೆ ತನಿಖೆ ಮುಂದುವರೆಸಿ ಅಂತಿಮ ವರದಿ ಸಲ್ಲಿಸಲು ಸೂಚನೆ ನೀಡಿದೆ.
ಈ ಮೂಲಕ ಎಡಿಜಿಪಿ ಅಲೋಕ್ ಕುಮಾರ್ ಅವರಿಗೆ ಸಂಕಷ್ಟ ಎದುರಾಗಿದೆ. ಸಿಬಿಐ ಸಲ್ಲಿಸಿದ್ದ ಬಿ ರಿಪೋರ್ಟ್ಗೆ ಮತ್ತೋರ್ವ ಎಡಿಜಿಪಿ ಭಾಸ್ಕರ್ ರಾವ್ ತಕರಾರು ಸಲ್ಲಿಸಿದ್ದರು. ಸಿಬಿಐ ಸಲ್ಲಿಸಿರುವ ಬಿ ರಿಪೋರ್ಟ್ ಅನ್ನೇ ದೋಷಾರೋಪ ಪಟ್ಟಿಯಾಗಿ ಪರಿಗಣಿಸಿ ತನಿಖೆ ನಡೆಸಬೇಕು ಎಂದು ಭಾಸ್ಕರ್ ರಾವ್ ಕೋರಿದ್ದರು. ಈ ಅರ್ಜಿಯನ್ನೂ ಸಿಬಿಐ ನ್ಯಾಯಾಲಯ ತಿರಸ್ಕರಿಸಿದೆ.
17ನೇ ಎಸಿಎಂಎಂ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಯಿತು. ಈ ಸಂಬಂಧ ಸಿಬಿಐನಿಂದಲೇ ಪ್ರಕರಣದ ಮರು ತನಿಖೆ ನಡೆಯಬೇಕು ಎಂದು ನ್ಯಾಯಾಲಯ ಸೂಚಿಸಿದೆ.
Key words: Phone tapping –case- against -ADGP Alok Kumar-CBI -Special Court -rejected -B report.