ಬೆಂಗಳೂರು,ಸೆ,26,2019(www.justkannada.in): ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಫೋನ್ ಕದ್ದಾಲಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಆರಂಭಿಸಿರುವ ಸಿಬಿಐ ಅಧಿಕಾರಿಗಳು, ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಮನೆ ಮೇಲೆ ದಾಳಿ ನಡೆಸಿದ್ದಾರೆ.
ಬೆಂಗಳೂರಿನ ಜಾನ್ಸನ್ ಮಾರ್ಕೆಟ್ ಬಳಿಯ ಅಲೋಕ್ ಕುಮಾರ್ ಅವರ ನಿವಾಸದ ಮೇಲೆ 20 ಅಧಿಕಾರಿಗಳ ತಂಡ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದೆ. ಅಲೋಕ್ ಕುಮಾರ್ ಪೊಲೀಸ್ ಆಯುಕ್ತರಾಗಿದ್ದ ಸಂದರ್ಭದಲ್ಲಿ ಬಿಜೆಪಿಯ ಆಪರೇಷನ್ ಕಮಲ ಸೇರಿದಂತೆ ಇನ್ನಿತರ ವಿಚಾರಗಳಿಗಾಗಿ ರಾಜಕಾರಣಿಗಳು, ಪೊಲೀಸರು, ಮಠಾಧೀಶರು, ಖಾಸಗಿ ವ್ಯಕ್ತಿಗಳ ಫೋನ್ ಟ್ಯಾಪಿಂಗ್ ಮಾಡಲಾಗಿತ್ತು ಎಂಬ ಆರೋಪವಿದೆ.
ಸಿಬಿಐ ಅಧಿಕಾರಿಗಳು ಅಲೋಕ್ ಕುಮಾರ್ ಮನೆಯಲ್ಲಿ ಪರಿಶೀಲನೆ ನಡೆಸುತ್ತಿದ್ದು, ಆಡಿಯೋ ಕಾಪಿ ಮಾಡಿದ್ದ ಪೆನ್ ಡ್ರೈವ್ ಮತ್ತು ದಾಖಲೆಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
Key words: Phone tapping –case-CBI – attack- Alok Kumar’s -house.