ಬೆಂಗಳೂರು, ನವೆಂಬರ್ 10, 2021 (www.justkannada.in): ದಾಂಪತ್ಯ ಜೀವನ ಸಂಬಂಧ ನಟಿ ಶಿಲ್ಪಾ ಶೆಟ್ಟಿ ಮೌನವಾಗಿದ್ದುಕೊಂಡೇ ಎಲ್ಲರ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ.
ಪತಿ ರಾಜ್ ಕುಂದ್ರಾ ಜತೆಗೆ ಹಿಮಾಚಲ ಪ್ರದೇಶದ ಧರ್ಮಶಾಲಾದ ದೇವಸ್ಥಾನಕ್ಕೆ ತೆರಳಿರುವ ಅವರು, ಅದರ ಫೋಟೋ ಹಾಗೂ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿಕೊಂಡಿದ್ದಾರೆ.
ಬ್ಲೂ ಫಿಲ್ಮ್ಂ ಕೇಸ್ನಲ್ಲಿ ಸಿಲುಕಿದ್ದ ರಾಜ್ ಕುಂದ್ರಾ ಅವರನ್ನು ಕಳೆದ ಜುಲೈ 19ರಂದು ಬಂಧಿಸಲಾಗಿತ್ತು. ಸೆಪ್ಟೆಂಬರ್ನಲ್ಲಿ ಅವರಿಗೆ ಜಾಮೀನು ಸಿಕ್ಕಿದೆ.
ಇದಾದ ಬಳಿಕ ಇದೇ ಮೊದಲ ಬಾರಿಗೆ ದಂಪತಿ ಒಟ್ಟಾಗಿ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ. ಈ ಮೂಲಕ ತಮ್ಮ ದಾಂಪತ್ಯ ಜೀವನದಲ್ಲಿ ಎಲ್ಲವೂ ಸರಿಯಾಗಿದೆ ಎಂದು ಪರೋಕ್ಷ ಸಂದೇಶ ರವಾನಿಸಿದ್ದಾರೆ.