ಬೆಂಗಳೂರು,ಮಾರ್ಚ್,29,2021(www.justkannada.in): ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಎಸ್ ಐಟಿ ರದ್ದು ಕೋರಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆಯಾಗಿದೆ.
ವಕೀಲೆ ಗೀತಾ ಮಿಶ್ರಾ ಎಂಬುವವರು ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆ ಮಾಡಿದ್ದಾರೆ. ಸರ್ಕಾರಿ ಗೆಜೆಟ್ ಆದೇಶವಿಲ್ಲದೆ ಎಸ್ ಐಟಿ ರಚನೆ ಮಾಡಲಾಗಿದೆ. ಸದಾಶಿವನಗರ ಕಬ್ಬನ್ ಪಾರ್ಕ್ ಠಾಣಾ ಪೊಲೀಸರೇ ತನಿಖೆ ನಡೆಸಬೇಕು. ಈ ಬಗ್ಗೆ ನಿರ್ದೇಶನ ನೀಡುವಂತೆ ಕೋರಿ ವಕೀಲೆ ಗೀತಾ ಮಿಶ್ರಾ ಅವರು ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆ ಮಾಡಿದ್ದಾರೆ.
ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಬಿಡುಗಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಎಸ್ ಐಟಿ ರಚನೆ ಮಾಡಿದ್ದು ಪ್ರಕರಣ ಕುರಿತು ಎಸ್ ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
Key words: PIL – High Court – cancellation -S IT -CD case.