ಬೆಂಗಳೂರು,ಡಿಸೆಂಬರ್,29,2022(www.justkannada.in): ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಲೇಬೇಕು ಎಂದು ಪಟ್ಟು ಹಿಡಿದಿರುವ ಸಮುದಾಯಕ್ಕೆ ಶಾಕಿಂಗ್ ನ್ಯೂಸ್ ಸಿಕ್ಕಿದೆ. ಪಂಚಮಸಾಲಿಗೆ 2ಎ ಮೀಸಲಾತಿ ನೀಡದಂತೆ ಕೋರಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆಯಾಗಿದೆ.
ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡದಂತೆ ಡಿ. ಜಿ ರಾಘವೇಂದ್ರ ಎಂಬುವವರು ಹೈಕೋರ್ಟ್ ಗೆ ಪಿಐಎಲ್ ಸಲ್ಲಿಸಿದ್ದು ಜನವರಿ ಮೊದಲ ವಾರವೇ ವಿಚಾರಣೆ ನಡೆಸುವುದಾಗಿ ಹೈಕೋರ್ಟ್ ಹೇಳಿದೆ.
ಮೀಸಲಾತಿ ಸಂಬಂಧ ಹಿಂದುಳಿದ ವರ್ಗಗಳ ಆಯೋಗ ಮಧ್ಯಂತರ ವರದಿ ಸಲ್ಲಿಸಿದೆ. ಮಧ್ಯಂತರ ವರದಿ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಲಾಗಿದೆ. ಸರ್ಕಾರ ವರದಿ ಪರಿಶೀಲಿಸಿ ಇನ್ನೂ ಕ್ರಮಕೈಗೊಂಡಿಲ್ಲ ಹೀಗಾಗಿ ವರದಿಯ ಪ್ರತಿ ಸಲ್ಲಿಸಲು ಕಾಲಾವಕಾಶ ನೀಡುವಂತೆ ಹೈಕೋರ್ಟ್ ಗೆ ಎಜಿ ಪ್ರಭುಲಿಂಗ ನಾವದಗಿ ಮನವಿ ಮಾಡಿದರು.
ಇದೇ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ಮಂಜುನಾಥ್, ಸರ್ಕಾರ ತರಾತುರಿಯಲ್ಲಿ ಮೀಸಲಾತಿ ಬಗ್ಗೆ ತೀರ್ಮಾನಿಸುವ ಸಾಧ್ಯತೆ ಇದೆ. ಮೀಸಲಾತಿ ಸಿಗುವುದು ಖಚಿತ ಎಂದು ಯತ್ನಾಳ್ ಹೇಳಿದ್ದಾರೆ ಹೀಗಾಗಿ ಅರ್ಜಿಯ ತುರ್ತು ವಿಚಾರಣೆಯ ಅಗತ್ಯವಿದೆ ಎಂದು ಮನವಿ ಮಾಡಿದರು.
ಇನ್ನು ಪಿಐಎಲ್ ವಿಚಾರಣೆಯನ್ನ ಹೈಕೋರ್ಟ್ ಜನವರಿ ಮೊದಲ ವಾರಕ್ಕೆ ನಿಗದಿ ಪಡಿಸಿದೆ. ಬಲಾಢ್ಯ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಿದರೇ ಹಿಂದುಳಿದ ಶೋಷಿತ ವರ್ಗಗಳಿಗೆ ಅನ್ಯಾಯವಾದಂತಾಗುತ್ತದೆ. ಹೀಗಾಗಿ ಮೀಸಲಾತಿ ನೀಡಬಾರದು ಎಂದು ಈಗಾಗಲೇ ರಾಜ್ಯ ಹಿಂದುಳಿದ ವರ್ಗಗಳ ಒಕ್ಕೂಟ, ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.
Key words: PIL – High Court -not give -2A reservation-Panchmasali.