ಬೆಂಗಳೂರು, ಜುಲೈ 24, 2022 (www.justkannada.in): ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ನಲ್ಲಿಬೆಳ್ಳಿ ಪದಕ ಗೆದ್ದ ನೀರಜ್ ಚೋಪ್ರಾಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.
ವಿಶ್ವ ಚಾಂಪಿಯನ್ಶಿಪ್ನಲ್ಲಿ ಐತಿಹಾಸಿಕ ಬೆಳ್ಳಿ ಪದಕವನ್ನು ಗೆದ್ದಿದ್ದಕ್ಕಾಗಿ ನೀರಜ್ ಚೋಪ್ರಾ ಅವರಿಗೆ ಅಭಿನಂದನೆಗಳು ಎಂದು ಪ್ರಧಾನಿ ಟ್ವಿಟ್ಟರ್ ನಲ್ಲಿ ಟ್ವೀಟ್ ಮಾಡಿದ್ದಾರೆ.
ನಮ್ಮ ಅತ್ಯಂತ ಪ್ರತಿಷ್ಠಿತ ಕ್ರೀಡಾಪಟುಗಳಲ್ಲಿ ಒಬ್ಬರಿಂದ ಉತ್ತಮ ಸಾಧನೆಯಾಗಿದೆ. ಭಾರತೀಯ ಕ್ರೀಡೆಗಳಿಗೆ ವಿಶೇಷ ಕ್ಷಣವಾಗಿದೆ ಎಂದು ಪ್ರಧಾನಿ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ನೀರಜ್ಗೆ ಪ್ರಬಲ ಸ್ಪರ್ಧೆ ನೀಡಿದ ಆಯಂಡರ್ಸನ್ ಪೀಟರ್ ಮೂರು ಬಾರಿ 90 ಮೀಟರ್ ಗಿಂತ ಹೆಚ್ಚು ಎಸೆದು ಬಂಗಾರದ ಪದಕ ಪಡೆದರು. ಜೆಕ್ ಗಣರಾಜ್ಯದ ಜಾಕುಬ್ ವಡ್ಲೆಜ್ ಕಂಚಿನ ಪದಕ ಗೆದ್ದರು.