ನವದೆಹಲಿ,ಮಾರ್ಚ್,7,2022(www.justkannada.in) ಪ್ರಧಾನಿ ನರೇಂದ್ರ ಮೋದಿ ಅವರು ದೂರವಾಣಿ ಮೂಲಕ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಜತೆ ಸುದೀರ್ಘ ಚರ್ಚೆ ನಡೆಸಿದ್ದಾರೆಂಬ ಮಾಹಿತಿ ಲಭ್ಯವಾಗಿದೆ.
ದೂರವಾಣಿ ಕರೆ ಮೂಲಕ ಪುಟೀನ್ ಜತೆ ಸುಮಾರು 50 ನಿಮಿಷಗಳ ಕಾಲ ಚರ್ಚಿಸಿದ್ದಾರೆ ಎನ್ನಲಾಗಿದೆ. ಉಕ್ರೇನ್ ನಲ್ಲಿ ಕದನ ವಿರಾಮ ಘೋಷಿಸಿದ ಹಿನ್ನೆಲೆ ರಷ್ಯಾವನ್ನು ಪ್ರಶಂಸಿಸಿರುವ ಪ್ರಧಾನಿ ನರೇಂದ್ರ ಮೋದಿ, ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿಯವರೊಂದಿಗೆ ನೇರವಾಗಿ ನೀವೇ ಒಮ್ಮೆ ಮಾತನಾಡಿ ಎಂದು ಪುಟಿನ್ರನ್ನು ಒತ್ತಾಯಿಸಿದ್ದಾರೆ ಎನ್ನಲಾಗಿದೆ.
ಇದಕ್ಕೂ ಮುನ್ನ ಪ್ರಧಾನಿ ಮೋದಿ ಅವರು ಉಕ್ರೇನ್ ಅಧ್ಯಕ್ಷ ಝೆಲೆನ್ ಸ್ಕಿ ಅವರ ಜತೆ ಮಾತನಾಡಿದ್ದಾರೆ. ಹಾಗೇ, ಭಾರತೀಯ ವಿದ್ಯಾರ್ಥಿಗಳ ಸ್ಥಳಾಂತರಕ್ಕೆ ಎಲ್ಲ ರೀತಿಯ ಸಹಕಾರ ನೀಡಿದ್ದಕ್ಕೆ ಧನ್ಯವಾದವನ್ನೂ ತಿಳಿಸಿದ್ದಾರೆ ಎನ್ನಲಾಗಿದೆ.
Key words: PM-Modi-discussed – Russian President- Putin.