ಬೆಂಗಳೂರು,ಸೆಪ್ಟಂಬರ್,24,2020(www.justkannada.in): ದೇಶದಲ್ಲಿ ಕೊರೋನಾ ಮಹಾಮಾರಿ ಆರ್ಭಟ ಮುಂದುವರೆದಿದ್ದು ದಿನೇ ದಿನೇ ಸೋಂಕಿತರ ಪ್ರಮಾಣ ಹೆಚ್ಚಾಗುತ್ತಿದೆ. ಈ ನಡುವೆ ನಿನ್ನೆ ಪ್ರಧಾನಿ ಮೋದಿ ಅವರ ಸಭೆಯಲ್ಲಿ ಮತ್ತೆ ಲಾಕ್ ಡೌನ್ ಬಗ್ಗೆ ಚರ್ಚೆಯೇ ಆಗಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.
ಕೊರೋನಾ ನಿರ್ವಹಣೆ ಸಂಬಂಧ ನಿನ್ನೆ ಪ್ರಧಾನಿ ಮೋದಿ ರಾಜ್ಯಗಳ ಸಿಎಂಗಳ ಜತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಚರ್ಚಿಸಿದ್ದರು. ಈ ವೇಳೆ ರಾಜ್ಯದಿಂದ ಸಿಎಂ ಬಿಎಸ್ ಯಡಿಯೂರಪ್ಪ, ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಭಾಗಿಯಾಗಿದ್ದರು.
ನಿನ್ನೆ ಮುಖ್ಯಮಂತ್ರಿಗಳ ಜೊತೆ ನಡೆದ ಮಹತ್ವದ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದಲ್ಲಿ ಕೊರೊನಾ ವೈರಸ್ ನಿಯಂತ್ರಣದ ಮಾಹಿತಿ ಪಡೆದರು. ಈ ವೇಳೆ ಲಾಕ್ ಡೌನ್ ವಿಚಾರ ಚರ್ಚೆಯಾಗಿದೆಯಾ ಎಂಬ ಪ್ರಶ್ನೆ ಎದ್ಧಿತ್ತು.
ಈ ಕುರಿತು ಸ್ಪಷ್ಟನೆ ನೀಡಿರುವ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ , ಸಭೆಯಲ್ಲಿ ಲಾಕ್ ಡೌನ್ ಬಗ್ಗೆ ಚರ್ಚೆಯಾಗಿಲ್ಲ. ಹೀಗಾಗಿ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಇಲ್ಲ ಎಂದು ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದಾರೆ.
Key words: PM Modi- meeting -not – discussion – lockdown- Minister- Sudhakar -clarified.