ನವದೆಹಲಿ,ಅಕ್ಟೋಬರ್,17,2022(www.justkannada.in): ಪಿಎಂ ಕಿಸಾನ್ ಸಮ್ಮಾನ್ ಸಮ್ಮೇಳನಕ್ಕೆ ಪ್ರಧಾನಿ ನರೇಂದ್ರ ಮೋದಿ ಇಂದು ಚಾಲನೆ ನೀಡಿದರು.
ದೆಹಲಿಯ ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯಲ್ಲಿ ನಡೆದ ಸಮಾರಂಭದಲ್ಲಿ ಪಿಎಂ ಕಿಸಾನ್ ಸಮ್ಮಾನ್ ಸಮ್ಮೇಳನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು. ರೈತರಿಗೆ ಕಿಸಾನ್ ಸಮ್ಮಾನ್ ಯೋಜನೆಯಡಿ 12ನೇ ಕಂತಿನ ಹಣವನ್ನು ಬಿಡುಗಡೆ ಮಾಡಿದರು. ಈ ಕಂತಿನಲ್ಲಿ ಸುಮಾರು 8 ಲಕ್ಷ ರೈತರ ಖಾತೆಗಳಿಗೆ 16 ಸಾವಿರ ಕೋಟಿ ರೂಪಾಯಿ ಜಮೆಯಾಗಿದೆ. ಬಳಿಕ, 600 ಪಿಎಂ ಕಿಸಾನ್ ಸಮೃದ್ಧಿ ಕೇಂದ್ರಗಳಿಗೆ ಮೋದಿ ಚಾಲನೆ ನೀಡಿದರು.
ಒಂದು ದೇಶ ಒಂದು ಗೊಬ್ಬರ ಹೆಸರಿನಲ್ಲಿ ಭಾರತ್ ಯೂರಿಯಾ, ಭಾರತ್ ಡಿಎಪಿ, ಭಾರತ್ ಎಂಓಪಿ, ಭಾರತ್ ಎನ್‍ಪಿಕೆ ರಸಗೊಬ್ಬರವನ್ನು ಲೋಕಾರ್ಪಣೆ ಮಾಡಿದರು. ಸಾವಿರಾರು ರೈತರು ಸಮಾರಂಭದ ಸ್ಥಳದಲ್ಲಿ ಉಪಸ್ಥಿತರಿದ್ದರು.
Key words: PM -Modi – PM -Kisan Samman- conference.