ಬೆಂಗಳೂರು, ಮಾರ್ಚ್,15,2024(www.justkannada.in): ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಈ ಕುರಿತು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಮಾತನಾಡಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಯಡಿಯೂರಪ್ಪ ಒಬ್ಬ ಹಿರಿಯ ರಾಜಕಾರಣಿ. ಇದರಲ್ಲಿ ಯಾವುದೇ ರಾಜಕೀಯ ದುರುದ್ದೇಶ ಇಲ್ಲ. ನಿನ್ನೆ ರಾತ್ರಿ ಒಬ್ಬ ಮಹಿಳೆ ದೂರು ಕೊಟ್ಟಿದ್ದಾರೆ. ಇದರನ್ನು ಪರಿಗಣಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಾನೂನು ಪ್ರಕಾರ ಪೊಲೀಸರು ತನಿಖೆ ಮಾಡುತ್ತಿದ್ದಾರೆ ಎಂದರು.
ಇದು ಒಬ್ಬ ಮಾಜಿ ಮುಖ್ಯಮಂತ್ರಿ ವಿಷಯಕ್ಕೆ ಸಂಬಂಧಿಸಿದ್ದಾಗಿದೆ. ಇದು ಬಹಳ ಸೂಕ್ಷ್ಮ ವಿಷಯವಾಗಿದ್ದು, ತನಿಖೆ ಆಗುವವರೆಗೂ ಯಾವುದೇ ವಿಷಯ ತಿಳಿಸಲು ಸಾಧ್ಯವಿಲ್ಲ. ಮಹಿಳೆಗೆ ರಕ್ಷಣೆ ಅಗತ್ಯ ಬಿದ್ದರೆ ಕೊಡುತ್ತೇವೆ. ಅವರನ್ನು ವಶಕ್ಕೆ ಪಡೆಯುವ ಸಂಬಂಧ ತನಿಖೆಯ ಮೇಲೆ ನಿರ್ಧಾರ ಮಾಡಲಾಗುತ್ತದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಮಾಹಿತಿ ಪಡೆದಿದ್ದಾರೆ ಎಂದರು.
ಬಿಎಸ್ ವೈ ವಿರುದ್ಧ ದೂರು ನೀಡಿದ ಮಹಿಳೆ ಮಹಿಳೆ ಮಾನಸಿಕ ಅಸ್ವಸ್ಥೆ ಅಂತಾ ಹೇಳುತ್ತಿದ್ದಾರೆ.ದೂರನ್ನು ಟೈಪ್ ಮಾಡಿ ಕೊಟ್ಟಿದ್ದಾರೆ. ಆದರೆ ಕೈಯಿಂದ ಬರೆದು ದೂರು ಕೊಟ್ಟಿದ್ದಲ್ಲ. ಟೈಪ್ ಕಾಪಿ ಕೊಟ್ಟಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಈ ಪ್ರಕರಣ ಒಬ್ಬ ಮಾಜಿ ಸಿಎಂ ವಿಷಯಕ್ಕೆ ಸಂಬಂಧಿಸಿದೆ. ಯಾವುದೇ ವಿಷಯ ಆದರೂ ಎಚ್ಚರಿಕೆಯಿಂದ ಹೇಳಬೇಕು ಎಂದು ತಿಳಿಸಿದರು.
Key words: POCSO case -against -former CM –BSY-Home Minister -Dr. G. Parameshwar.