ಪೋಕ್ಸೋ ಪ್ರಕರಣ: ಮಾಜಿ ಸಿಎಂ ಬಿಎಸ್ ವೈಗೆ CID ನೋಟಿಸ್

ಬೆಂಗಳೂರು, ಜೂನ್ 12,2024 (www.justkannada.in): ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಿ. ಎಂ ಯಡಿಯೂರಪ್ಪಗೆ ಸಿಐಡಿ ನೋಟಿಸ್ ನೀಡಿದೆ.

ಇದರ ಬೆನ್ನಲ್ಲೇ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಪ್ರಕರಣ ರದ್ದು ಕೋರಿ ಕರ್ನಾಟಕ ಹೈಕೋರ್ಟ್​​ಗೆ  ಅರ್ಜಿ ಸಲ್ಲಿಸಿದ್ದಾರೆ. ಯಾವುದೇ ಕಾನೂನುಬಾಹಿರ ಕೃತ್ಯ ಎಸಗಿಲ್ಲ. ಫಿರ್ಯಾದಿ ಮಹಿಳೆಗೆ ದೂರು ನೀಡುವುದೇ ಹವ್ಯಾಸವಾಗಿತ್ತು. ಎಫ್‌ಐಆರ್ ದಾಖಲಾದ ನಂತರ ವಿಚಾರಣೆಗೆ ಹಾಜರಾಗಿದ್ದೆ. ಏಪ್ರಿಲ್​​​ 12ರಂದು ಪೊಲೀಸರ ವಿಚಾರಣೆಗೆ ಹಾಜರಾಗಿದ್ದೆ. ಪೊಲೀಸರು ಹೇಳಿಕೆ ದಾಖಲಿಸಿಕೊಳ್ಳದೇ ಧ್ವನಿ ಮಾದರಿ ಸಂಗ್ರಹಿಸಿದ್ದರು. ತಮ್ಮ ವಿರುದ್ಧದ ದೂರಿನಲ್ಲಿ ಅಪರಾಧದ ಅಂಶಗಳಿಲ್ಲದಿರುವುದರಿಂದ ಪ್ರಕರಣವನ್ನು ರದ್ದು ಪಡಿಸಬೇಕು ಬಿಎಸ್ ವೈ ಹೈಕೋರ್ಟ್​ಗೆ ಮನವಿ ಮಾಡಿದ್ದಾರೆ.

ತಮ್ಮ ಪುತ್ರಿಯೊಂದಿಗೆ ಅನುಚಿತ ವರ್ತನೆ ತೋರಿದ್ದಾರೆ  ಎಂದು ಮಾರ್ಚ್ 14ರಂದು  ಸಂತ್ರಸ್ತೆ ತಾಯಿ ಸದಾಶಿವನಗರ ಪೊಲೀಸ್ ಠಾಣೆಗೆ ದೂರುನೀಡಿದ್ದರು. ದೂರುದಾರ ಮಹಿಳೆ ಇತ್ತೀಚೆಗೆ ಅನಾರೋಗ್ಯದಿಂದ ಮೃತಪಟ್ಟಿದ್ದರು.

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ ಎಸಗಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿತ್ತು. ಫೆಬ್ರವರಿಯಲ್ಲಿ ಮಗಳ ಮೇಲೆ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಿ ಸಂತ್ರಸ್ತೆಯ ತಾಯಿ ದೂರು ನೀಡಿದ್ದರು. ಈ ಸಂಬಂಧ ಸಿಐಡಿ ನೋಟಿಸ್ ನೀಡಿದ್ದು ಈ ಬೆನ್ನಲ್ಲೆ ಬಿಎಸ್ ವೈ ಪ್ರಕರಣ ರದ್ದುಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Key words: POCSO- case- CID- notice -former CM -BSY