ಚಿತ್ರದುರ್ಗ, ಅಕ್ಟೋಬರ್, 7,2024 (www.justkannada.in): ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿದ್ದ ಚಿತ್ರದುರ್ಗದ ಮುರುಘಾಶ್ರೀ ಅವರನ್ನು ಬಿಡುಗಡೆಗೆ ಚಿತ್ರದುರ್ಗದ ಎರಡನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ.
ಪ್ರಕರಣ ಸಂಬಂಧ ಈ ಹಿಂದೆ ಹೈಕೋರ್ಟ್ ಮುರುಘಾಶ್ರೀಗೆ ಜಾಮೀನು ನೀಡಿತ್ತು. ಆದರೆ, ಸಾಕ್ಷ್ಯ ವಿಚಾರಣೆ ನಡೆಸುವವರೆಗೆ ಬಂಧನದಲ್ಲಿಡಲು ಸುಪ್ರೀಂಕೋರ್ಟ್ ಆದೇಶಿಸಿತ್ತು. ಇದೀಗ, ಸಾಕ್ಷ್ಯಗಳ ವಿಚಾರಣೆ ಬಹುತೇಕ ಪೂರ್ಣಗೊಂಡ ಹಿನ್ನೆಲೆಯಲ್ಲಿ ಮುರುಘಾಶ್ರಿ ಬಿಡುಗಡೆಗೆ ಚಿತ್ರದುರ್ಗದ ಎರಡನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶವನ್ನು ಹೊರಡಿಸಿದೆ.
ಸಂತ್ರಸ್ತೆಯರಿಬ್ಬರು ಸೇರಿದಂತೆ 12 ಸಾಕ್ಷಿಗಳ ವಿಚಾರಣೆ ಪೂರ್ಣಗೊಂಡಿದೆ. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಜಾಮೀನಿನ ಆದೇಶದ ಪ್ರಕಾರ ಮುರುಘಾಶ್ರೀ ಬಿಡುಗಡೆಯಾಗಿದ್ದಾರೆ.
Key words: POCSO case, Court, orders, release , Murughashri