ಪೋಕ್ಸೋ ಪ್ರಕರಣ: ಮಾಜಿ ಸಿಎಂ ಬಿಎಸ್ ವೈ ಮಧ್ಯಂತರ ಜಾಮೀನು ವಿಸ್ತರಣೆ

ಬೆಂಗಳೂರು,ಜೂನ್,28,2024 (www.justkannada.in): ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ  ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತೆ ರಿಲೀಫ್ ಸಿಕ್ಕಿದ್ದು ಮಧ್ಯಂತರ ಜಾಮೀನು ವಿಸ್ತರಣೆ ಮಾಡಿ ನ್ಯಾಯಾಲಯ ಆದೇಶಿಸಿದೆ.

ತಮ್ಮ ವಿರುದ್ದ ದಾಖಲಾಗಿದ್ದ ಪೋಕ್ಸೋ ಪ್ರಕರಣ ರದ್ದು ಕೋರಿ ಬಿ.ಎಸ್ ಯಡಿಯೂರಪ್ಪ ಅರ್ಜಿ ಸಲ್ಲಿಸಿದ್ದರು.  ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗದ ಹಿನ್ನೆಲೆ, ತನಿಖೆ ನಡೆಸುತ್ತಿದ್ದ ಸಿಐಡಿ ಕೋರ್ಟ್ ಮೊರೆ ಹೋಗಿತ್ತು. ಹೀಗಾಗಿ  ಬಿಎಸ್ ವೈ ವಿರುದ್ದ ಜಾಮೀನು ರಹಿತ ವಾರೆಂಟ್ ಹೊರಡಿಸಲಾಗಿತ್ತು.

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ಬಿಎಸ್ ವೈರನ್ನ ಬಂಧಿಸದಂತೆ ಸಿಐಡಿಗೆ ಸೂಚನೆ ನೀಡಿತ್ತು. ಇದೀಗ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಮಧ್ಯಂತರ ಜಾಮೀನು ವಿಸ್ತರಣೆ ಮಾಡಿ ವಿಚಾರಣೆಯನ್ನು 2 ವಾರಗಳ ಕಾಲ ಮುಂದೂಡಿದೆ.

ಪೋಕ್ಸೋ ಪ್ರಕರಣದಲ್ಲಿ ಆಕ್ಷೇಪಣೆ ಸಲ್ಲಿಸುವಂತೆ ಎಸ್ ಪಿಪಿಗೆ ಕೋರ್ಟ್ ಸೂಚನೆ ನೀಡಿದೆ. ಬಿ.ಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಗೆ ಪೊಲೀಸರು ನಿನ್ನೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.

Key words: POCSO, case, Former CM, BSY, interim bail