ಮಾಜಿ ಸಿಎಂ ಬಿಎಸ್ ವೈ ವಿರುದ್ದ ಪೋಕ್ಸೋ ಕೇಸ್: ಇಂದು ಹೈಕೋರ್ಟ್ ನಲ್ಲಿ ವಿಚಾರಣೆ

ಬೆಂಗಳೂರು,ಡಿಸೆಂಬರ್6,2024 (www.justkannada.in): ತಮ್ಮ ವಿರುದ್ದ ದಾಖಲಾಗಿರುವ ಪೋಕ್ಸೊ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸಲ್ಲಿಸಿರುವ ಅರ್ಜಿ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ನಡೆಯಲಿದೆ.

ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ನೇತೃತ್ವದ ಏಕಸದಸ್ಯ ಪೀಠದಲ್ಲಿ ಇಂದು ಮಧ್ಯಾಹ್ನ 2.30ಕ್ಕೆ ಬಿಎಸ್ ಯಡಿಯೂರಪ್ಪ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಯಲಿದೆ.

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಪರ ಹಿರಿಯ ವಕೀಲ ಸಿವಿ ನಾಗೇಶ್ ವಾದ ಮಂಡಿಸಲಿದ್ದಾರೆ. ಸಿಐಡಿ ಪರ ವಕೀಲ ರವಿವರ್ಮಕುಮಾರ್ ಹಾಜರಿರಲಿದ್ದಾರೆ. ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ 2024ರ ಮಾರ್ಚ್ ನಲ್ಲಿ ಮಾಜಿ ಸಿಎಂ ಬಿಎಸ್​ವೈ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು. ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿಗೆ ವರ್ಗಾಯಿಸಿತ್ತು.

Key words: POCSO case, former CM, BSY,High Court