ಬೆಂಗಳೂರು, ಜ.೦೮,೨೦೨೫ : ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧದ ದೂರನ್ನು ರದ್ದುಗೊಳಿಸಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜ. 10ಕ್ಕೆ ಮುಂದೂಡಿದೆ.
‘ನನ್ನ ವಿರುದ್ಧ ದಾಖಲಾಗಿರುವ ಪೋ ಪ್ರಕರಣ ರದ್ದುಪಡಿಸಬೇಕು’ ಎಂದು ಕೋರಿ ಬಿ.ಎಸ್.ಯಡಿಯೂರಪ್ಪ ಸಲ್ಲಿಸಿರುವ ರಿಟ್ ಅರ್ಜಿಯನ್ನು, ‘ಶಾಸಕರು- ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ಆರ್ ನ್ಯಾಯಪೀಠದ (ಧಾರವಾಡ) ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಮಂಗಳವಾರ ವಿಚಾರಣೆ ನಡೆಸಿದರು.
ವಿಚಾರಣೆ ವೇಳೆ ಯಡಿಯೂರಪ್ಪ ಪರ ಪದಾಂಕಿತ ಹಿರಿಯ ವಕೀಲ ಸಿ.ವಿ.ನಾಗೇಶ್, ‘ಸತ್ಯವನ್ನು ಬಯಲು ಮಾಡಲಿಕ್ಕಾಗಿ ತನಿಖೆ ನಡೆಸಲಾಗುತ್ತದೆ. ಆದರೆ, ತನಿಖೆ ಪಕ್ಷಪಾತಿ ಯಾಗಿರಬಾರದು. ನ್ಯಾಯಯುತವಾಗಿರಬೇಕು’ ಎಂದರು.
‘ದೂರಿಗೆ ಸಂಬಂಧಿಸಿದಂತೆ ಸಂಜ್ಞೆಯ ಅಪರಾಧ ಪರಿಗಣಿಸುವ ಸಂದರ್ಭದಲ್ಲಿ ವಿಚಾರಣಾ ನ್ಯಾಯಾಲಯವು ತನಿಖಾಧಿಕಾರಿಯ ಅಭಿಪ್ರಾಯವನ್ನು ಒಪ್ಪಲಾಗದು. ದೂರು ದಾಖಲಿಸುವುದಕ್ಕೂ ಮುನ್ನ ದೂರುದಾರೆ (ಸಂತ್ರಸ್ತೆಯ ತಾಯಿ; ಈಗ ಮೃತಪಟ್ಟಿದ್ದಾರೆ) ಮತ್ತು ಸಂತ್ರಸ್ತೆಯು ಹಲವು ಬಾರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದಾರೆ’ ಎಂಬುದನ್ನು ಪುನರುಚ್ಚರಿಸಿದರು.
ಒಂದು ಹಂತದಲ್ಲಿ ನ್ಯಾಯಪೀಠವು ನಾಗೇಶ್ ಅವರಿಗೆ, ‘ನೀವು ಉಲ್ಲೇಖಿಸುತ್ತಿರುವ ಸಾಕ್ಷಿಗಳ ಹೇಳಿಕೆಯನ್ನು ಪರಿಗಣಿಸ ಬೇಕು ಎಂದಾದರೆ ಸಂತ್ರಸ್ತೆಯ ಹೇಳಿಕೆಯನ್ನೂ ಪರಿಗಣಿಸ ಬೇಕಾಗುತ್ತದೆ. ಇಡೀ ಘಟನೆಯನ್ನು ಸಂತ್ರಸ್ತೆ ವಿವರಿಸಿದ್ದಾರೆ. ಆಗ ಇದು ಹೇಳಿಕೆ ವರ್ಸಸ್ ಹೇಳಿಕೆ ಎಂತಾಗುವುದಿಲ್ಲವೇ ಎಂದು ಪ್ರಶ್ನಿಸಿತು. ಇದಕ್ಕೆ ನಾಗೇಶ್ ವಾದ ಮಂಡನೆಗೆ ಮತ್ತಷ್ಟು ಸಮಯಾವಕಾಶ ಕೋರಿದ ಕಾರಣ ನ್ಯಾಯಪೀಠ ವಿಚಾರಣೆಯನ್ನು ಇದೇ 10ಕ್ಕೆ ಮುಂದೂಡಿತು.
ಕೃಪೆ: ಪ್ರಜಾವಾಣಿ
KEY WORDS: B.S.Yadiyurappa, POCSO, adjourned,
SUMMARY:
B.S.Yadiyurappa POCSO case: Hearing adjourned to Jan. 10.
Justice M. Nagaprasanna of the Special R Bench (Dharwad) for ‘Trial of Criminal Cases against MLAs and MPs’ heard the writ petition filed by B.S. Yediyurappa on Tuesday, seeking quashing of the FIR registered against him.