ಬೆಂಗಳೂರು,ಮೇ,4,2019(www.justkannada.in): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಉಗ್ರ ಸಂಚರಿಸಿದ್ದ ಎಂಬ ಮಾಹಿತಿ ಲಭ್ಯವಾದ ಹಿನ್ನೆಲೆ ಬೆಂಗಳೂರಿನಲ್ಲಿ ಪೊಲೀಸರ ಕಟ್ಟೆಚ್ಚರ ವಹಿಸಿದ್ದು ನಗರದೆಲ್ಲಡೆ ಪೊಲೀಸರಿಂದ ಹದ್ದಿನ ಕಣ್ಣಿಟ್ಟಿದ್ದಾರೆ.
ಬೆಂಗಳೂರು, ಚೆನ್ನೈ, ಕೇರಳ ಮೊದಲಾದ ಕಡೆ ಸಂಚರಿಸಿದ್ದ ನ್ಯಾಷನಲ್ ತೌಹಿತ್ ಜಮಾತ್ ಸಂಘಟನೆಯ ಉಗ್ರ ಬೆಂಗಳೂರಿಗೂ ಕಳೆದ ಒಂದು ವರ್ಷದ ಅವಧಿಯಲ್ಲಿ ಬಂದಿದ್ದ ಎಂಬ ಮಾಹಿತಿ ತಿಳಿದು ಬಂದ ಹಿನ್ನೆಲೆ ಸೆಂಟ್ರಲ್ ಐಬಿಯಿಂದ ಕಟ್ಟೆಚ್ಚರ ವಹಿಸಲು ಸೂಚನೆ ನೀಡಲಾಗಿತ್ತು.
ಐಬಿ ಸೂಚನೆ ಮೇರೆಗೆ ಅಲರ್ಟ್ ಆದ ಪೊಲೀಸರು ರೈಲ್ವೇ ನಿಲ್ದಾಣ, ವಿಮಾನ ನಿಲ್ದಾಣ, ಬಸ್ ನಿಲ್ದಾಣಗಳಲ್ಲಿ ತೀವ್ರ ತಪಾಸಣೆ ನಡೆಸುತ್ತಿದ್ದಾರೆ. ಅಪರಿಚಿತರ ಬಗ್ಗೆ ಎಚ್ಚರ ವಹಿಸುವಂತೆ ಸೂಚನೆ ನೀಡಲಾಗಿದೆ.
ಇನ್ನು ಈ ಬಗ್ಗೆ ಮಾತನಾಡಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸುನೀಲ್ ಕುಮಾರ್ ಅವರು, ಬೆಂಗಳೂರಿನ ಜನನಿಬಿಡ ಪ್ರದೇಶಗಳಲ್ಲಿ ಎಚ್ಚರ ವಹಿಲಾಗಿದೆ. ತಮಿಳುನಾಡು, ಕೇರಳ, ಆಂಧ್ರ ಪ್ರದೇಶ, ತೆಲಂಗಾಣ, ಪುದುಚೇರಿ, ಗೋವಾ, ಮಹಾರಾಷ್ಟ್ರ ಮತ್ತು ಕರ್ನಾಟಕದ ಪ್ರಮುಖ, ಜನನಿಬಿಡ ಪ್ರದೇಶಗಳಲ್ಲಿ ದಾಳಿಯಾಗಬಹುದು ಎಂಬ ಮಾಹಿತಿಯ ಮೇರೆಗೆ ಕಟ್ಟೆಚ್ಚರ ವಹಿಸಲಾಗಿತ್ತು. ಇದೀಗ ಬೆಂಗಳೂರಿನ ಜನನಿಬಿಡ ಪ್ರದೇಶಗಳಲ್ಲೂ ಕಟ್ಟೆಚ್ಚರ ವಹಿಸಲಾಗಿದೆ ಎಂದು ಹೇಳಿದ್ದಾರೆ.
ಚರ್ಚ್, ಮಸೀದಿ, ದೇವಾಲಯದ ಮುಖ್ಯಸ್ಥರ ಜತೆ ಹಿರಿಯ ಅಧಿಕಾರಿಗಳು ಚರ್ಚೆ ನಡೆಸಿದ್ದಾರೆ. ನಮಗೆ ಬಂದ ಮಾಹಿತಿ ಪ್ರಕಾರ ಭದ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ಸುನೀಲ್ ಕುಮಾರ್ ತಿಳಿಸಿದರು.
Key words: Police – Bangalore- Security- action-terrrorist-attack