ಬೆಂಗಳೂರು,ಫೆಬ್ರವರಿ,4,2025 (www.justkannada.in): ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಕೊಲೆ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ಬೆಂಗಳೂರಿನ ದೊಮ್ಮಸಂದ್ರದ ಬಳಿ ನಡೆದಿದೆ.
ಆರೋಪಿ ರೌಡಿ ಶೀಟರ್ ಶ್ರೀನಿವಾಸ್ ಅಲಿಯಾಸ್ ಗುಬ್ಬಚ್ಚಿ ಸೀನ ಕಾಲಿಗೆ ಬೆಂಗಳೂರು ಹೊರವಲಯ ಆನೇಕಲ್ ಉಪವಿಭಾಗದ ಸರ್ಜಾಪುರ ಇನ್ಸ್ ಪೆಕ್ಟರ್ ನವೀನ್ ಕುಮಾರ್ ಗುಂಡು ಹಾರಿಸಿದ್ದಾರೆ.
ಜನವರಿ 28ನೇ ರಂದು ರಾತ್ರಿ ಶ್ರೀನಿವಾಸ್ ಅಲಿಯಾಸ್ ಗುಬ್ಬಚ್ಚಿ ಸೀನ ಗ್ಯಾಂಗ್ ಮಾಜಿ ರೌಡಿ ಶೀಟರ್ ವೆಂಕಟೇಶ್ ಅಲಿಯಾಸ್ ವೆಂಕಿ ಕೊಲೆ ಮಾಡಿ ಪರಾರಿಯಾಗಿದ್ದರು. ಈ ಮಧ್ಯೆ ದೊಮ್ಮಸಂದ್ರದ ಬಳಿ ರೌಡಿ ಶೀಟರ್ ಶ್ರೀನಿವಾಸ್ ಅವಿತು ಕುಳಿತಿದ್ದನು. ಈ ವೇಳೆ ಪೊಲೀಸರು ಆತನನ್ನು ಬಂಧಿಸಲು ತೆರಳಿದ್ದು ಈ ಸಮಯದಲ್ಲಿ ಪೊಲೀಸರ ಮೇಲೆಯೇ ಶ್ರೀನಿವಾಸ್ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ.
ಇನ್ಸ್ ಪೆಕ್ಟರ್ ನವೀನ್ ಅವರು ಗಾಳಿಯಲ್ಲಿ ಗುಂಡು ಹಾರಿಸಿ ಶರಣಾಗುವಂತೆ ತಿಳಿಸಿದ್ದು ಆದರೆ ಇದಕ್ಕೆ ಬಗ್ಗದ ಆರೋಪಿ ಶ್ರೀನಿವಾಸ್ ಪೊಲೀಸ್ ಪೇದೆ ಇರ್ಫಾನ್ ಮೇಲೆ ಹಲ್ಲೆ ನಡೆಸಿ ಎಸ್ಕೇಪ್ ಆಗಲು ಯತ್ನಿಸಿದ್ದಾನೆ. ಈ ವೇಳೆ ಆತ್ಮರಕ್ಷಣೆಗಾಗಿ ಆರೋಪಿ ಶ್ರೀನಿವಾಸ್ ಕಾಲಿಗೆ ಇನ್ಸ್ ಪೆಕ್ಟರ್ ನವೀನ್ ಗುಂಡು ಹಾರಿಸಿದ್ದಾರೆ. ಬಳಿಕ ಆತನನ್ನು ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
Key words: Police, fire , murder, accused