ರಾಜಕಾರಣ ಅಂದ್ರೆ ಚೆಸ್ ಗೇಮ್: ಕಾಂಗ್ರೆಸ್ ಸೇರಿದವರೆಲ್ಲರಿಗೂ ಟಿಕೆಟ್ ನೀಡಲು ಆಗಲ್ಲ- ಡಿ.ಕೆ ಶಿವಕುಮಾರ್.

ಬೆಂಗಳೂರು,ಏಪ್ರಿಲ್,7,2023(www.justkannada.in):  ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ನ 2ನೇ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆ ಹಲವು ಕ್ಷೇತ್ರಗಳಲ್ಲಿ ಬಂಡಾಯದ ಬಿಸಿ ತಟ್ಟಿದ್ದು, ಬಂಡಾಯ ಶಮನಕ್ಕೆ ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ.

ಬಂಡಾಯ, ಭಿನ್ನಮತ ಕುರಿತು ಮಾತನಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್,  ರಾಜಕಾರಣ ಅಂದ್ರೆ ಪುಟ್ಬಾಲ್ ಅಲ್ಲ.  ಚೆಸ್ ಗೇಮ್ ಇದ್ದಂಗೆ. ಕಾಂಗ್ರೆಸ್ ಸೇರಿಸಿಕೊಳ್ಳುವಾಗ ಟಿಕೆಟ್ ಕೊಡುವುದಾಗಿ ಹೇಳಿರಲಿಲ್ಲ. ಬೇಷರತ್ ಆಗಿ ಕಾಂಗ್ರೆಸ್ ಗೆ ಸೇರಿಸಿಕೊಂಡಿದ್ದವು. ಕಾಂಗ್ರೆಸ್ ಪಕ್ಷಕ್ಕೆ  ಸೇರಿದ ಎಲ್ಲರಿಗೂ ಟಿಕೆಟ್ ಕೊಡಲು ಆಗುವುದಿಲ್ಲ.  ಅಸಮಾಧಾನ ಇರುವವರನ್ನ ಕರೆದು ಮಾತಾಡುತ್ತೇವೆ, ಸರಿಪಡಿಸುತ್ತೇವೆ ಎಂದು ಹೇಳಿದರು.

ಟಿಕೆಟ್ ಕೈತಪ್ಪಿದ ಹಿನ್ನೆಲೆ ಚಿತ್ರದುರ್ಗದಲ್ಲಿ ರಘು ಆಚಾರ್ ಬಂಡಾಯವೆದ್ದು ಇದೀಗ ಜೆಡಿಎಸ್ ಸೇರ್ಪಡೆಗೆ ಮುಂದಾಗಿದ್ದಾರೆ. ಹಾಗೆಯೇ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದ ವೈಎಸ್ ವಿ ದತ್ತ ಅವರಿಗೆ ಕಡೂರು ಕ್ಷೇತ್ರದ ಟಿಕೆಟ್ ಕೈತಪ್ಪಿದ್ದು ಬೆಂಬಲಿಗರು, ಅಭಿಮಾನಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Key words: Politics – chess- game-tickets – Congress – DK Shivakumar.