ಬೆಂಗಳೂರು,ಮೇ,9,2023(www.justkannada.in): ಮತಗಟ್ಟೆ ತರಬೇತಿ ವೇಳೆ ಉದ್ಧಟತನ ಆರೋಪದ ಮೇಲೆ ಮಹಿಳಾ ಇನ್ಸ್ ಪೆಕ್ಟರ್ ರೊಬ್ಬರನ್ನ ಅಮಾನತು ಮಾಡಲಾಗಿದೆ.
ಭವ್ಯಾ ಅಮಾನತುಗೊಳಗಾದ ಮಹಿಳಾ ಇನ್ಸ್ಪೆಕ್ಟರ್. ಬೆಂಗಳೂರು ನಗರ ಜಿಲ್ಲಾ ಚುನಾವಣಾಧಿಕಾರಿ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ ಎನ್ನಲಾಗಿದೆ. ಮಲ್ಲತ್ತಹಳ್ಳಿ ಅಂಬೇಡ್ಕರ್ ವಿಶ್ವವಿದ್ಯಾಲಯದಲ್ಲಿ ಮತಗಟ್ಟೆಗಳಲ್ಲಿ ಕಾರ್ಯನಿರ್ವಹಿಸುವ ಬಗ್ಗೆ ತರಬೇತಿ ಆಯೋಜನೆ ಮಾಡಲಾಗಿತ್ತು. ಈ ವೇಳೆ ತರಬೇತಿಗೆ ಹಾಜರಾಗದೆ ಇನ್ಸ್ ಪೆಕ್ಟರ್ ಭವ್ಯ ಪೇಪರ್ ಓದುತ್ತಾ ಕುಳಿತಿದ್ದರು. ನೋಡಲ್ ಅಧಿಕಾರಿ ಹಾಗೂ ಸೆಕ್ಟರ್ ಅಧಿಕಾರಿ ಪ್ರಶ್ನಿಸಿದಾಗ ಉದ್ಧಟತನ ಮೆರೆದಿದ್ದಾರೆ ಎನ್ನಲಾಗಿದೆ.
ನೀವು ಹೇಳಿದಂತೆ ಕೇಳುವುದಕ್ಕೆ ನಾನು ನಿಮ್ಮ ಡಿಪಾರ್ಟ್ಮೆಂಟ್ ಅಲ್ಲ. ಈ ತರಬೇತಿಯಿಂದ ಯಾವುದೇ ಉಪಯೋಗವಿಲ್ಲ. ಯಾರಿಗಾದರೂ ಹೇಳಿಕೊಳ್ಳಿ ಎಂದಿದ್ದಾರೆ ಎನ್ನಲಾಗಿದೆ. ಈ ವಿಚಾರವನ್ನ ಬಿಬಿಎಂಪಿ ಆಯುಕ್ತರಿಗೆ ಅಧಿಕಾರಿಗಳು ವಿಷಯ ತಿಳಿಸಿದ್ದಾರೆ. ಈ ಹಿನ್ನಲೆ ಪ್ರಜಾಪ್ರತಿನಿಧಿ ಕಾಯ್ದೆಯಡಿ ಇನ್ಸ್ ಪೆಕ್ಟರ್ ಭವ್ಯಾರನ್ನ ಜಿಲ್ಲಾ ಚುನಾವಣಾ ಅಧಿಕಾರಿ ಅಮಾನತುಗೊಳಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
Key words: polling booth –training- Woman inspector -suspended.