ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರ ನೇಮಕ ರದ್ದು ಕೋರಿ ಹೈಕೋರ್ಟ್ ಮೊರೆ: ಸರ್ಕಾರಕ್ಕೆ  ನೋಟಿಸ್

The court was hearing a petition challenging the appointment of MLA P M Narendraswamy as chairman of the Karnataka State Pollution Control Board (KSPCB) in violation of the Supreme Court guidelines.

ಬೆಂಗಳೂರು, ಫೆ.೧೪,೨೦೨೫: ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (KSPCB) ಅಧ್ಯಕ್ಷರಾಗಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರನ್ನು ನೇಮಕ ಮಾಡಲಾಗಿದೆ ಎಂದು ಆಕ್ಷೇಪಿಸಿ ಹೈಕೋರ್ಟ್‌ಗೆ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, ಪ್ರತಿವಾದಿಗಳಿಗೆ ನೋಟಿಸ್‌ ಜಾರಿಗೊಳಿಸಿದೆ.

ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್,  ರಾಜ್ಯ ಸರ್ಕಾರ ಹಾಗೂ  ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಪಿ.ಎಂ .ನರೇಂದ್ರಸ್ವಾಮಿ ಅವರಿಗೆ ನೋಟಿಸ್ ನೀಡಿದೆ.

ಘಟನೆ ಹಿನ್ನೆಲೆ:

ಶಾಶ್ವತ ನೀರಾವರಿ ಹೋರಾಟ ಸಮಿತಿಯ ಆರ್. ಆಂಜನೇಯರೆಡ್ಡಿ ಬುಧವಾರ ಈ ಕುರಿತು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದರು.  ಇಂದು ಹೈಕೋರ್ಟ್ ನಲ್ಲಿ ಅರ್ಜಿಯ ವಿಚಾರಣೆ ನಡೆಯಿತು. ವಿಚಾರಣೆ ಬಳಿಕ ರಾಜ್ಯ ಸರ್ಕಾರ ಮತ್ತು ಶಾಸಕ ನರೇಂದ್ರ ಸ್ವಾಮಿ ಸೇರಿ ಪ್ರತಿವಾದಿಗಳಿಗೆ ಹೈ ಕೋರ್ಟ್ ವಿಭಾಗೀಯ ಪೀಠದಿಂದ ನೋಟಿಸ್ ಜಾರಿ.

ಅರ್ಜಿದಾರರ ಪರ ವಾದ ಮಂಡಿಸಿದ ನ್ಯಾಯವಾದ ಎಕ್ಸ್‌.ಎಂ.ಜೋಸೆಫ್‌, ಸುಪ್ರೀಂ ಕೋರ್ಟ್ ಮಾರ್ಗಸೂಚಿ ಉಲ್ಲಂಘಿಸಿ ನೇಮಕ ಮಾಡಲಾಗಿದೆ. ಆದ್ದರಿಂದ ಮಂಡಳಿ ಅಧ್ಯಕ್ಷರಾಗಿ ನರೇಂದ್ರಸ್ವಾಮಿ ನೇಮಕ ರದ್ದು ಪಡಿಸಲು ಅರ್ಜಿಯಲ್ಲಿ ಮನವಿ. ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ರಾಜ್ಯಗಳ ಮಾಲಿನ್ಯ ನಿಯಂತ್ರಣ ಮಂಡಳಿಗಳ ಅಧ್ಯಕ್ಷರ ನೇಮಕ ಸಂಬಂಧ ಸುಪ್ರೀಂ ಕೋರ್ಟ್ ಸ್ಪಷ್ಟ ಮಾರ್ಗಸೂಚಿ ಹೊರಡಿಸಿದೆ. ಆದರೆ ರಾಜ್ಯ ಸರ್ಕಾರ ಆ ಮಾರ್ಗಸೂಚಿಗಳನ್ನು ಉಲ್ಲಂಘನೆ ಮಾಡಿದೆ. ಅಲ್ಲದೆ, ಪರಿಸರ ವಿಜ್ಞಾನ ಸೇರಿದಂತೆ ಯಾವುದೇ ನಿರ್ದಿಷ್ಟ ಅರ್ಹತೆ ಇಲ್ಲದವರನ್ನು ರಾಜಕೀಯ ಕಾರಣಗಳಿಗೆ ನೇಮಕ ಮಾಡಲಾಗಿದೆ. ಹಾಗಾಗಿ ಮಾಲಿನ್ಯ ನಿಯಂತ್ರಣ ಮಂಡಳಿಗೆ ಅಧ್ಯಕ್ಷರಾಗಿ ಪಿ.ಎಂ. ನರೇಂದ್ರಸ್ವಾಮಿ ನೇಮಕ ಮಾಡಿ ಹೊರಡಿಸಿರುವ ಆದೇಶ ರದ್ದುಪಡಿಸಬೇಕು ಎಂದು ವಾದಿಸಿದರು.

ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಪರ ವಕೀಲರು, ಸರಕಾರ ಸುಪ್ರೀಂಕೋರ್ಟ್‌ನ ಯಾವುದೇ ನಿಯಮಗಳನ್ನು ಉಲ್ಲಂಘಿಸಿಲ್ಲ. ಕೇಂದ್ರ ಸರಕಾರ ರೂಪಿಸಿರುವ ನಿಯಮಗಳನ್ನು ಸಂಪೂರ್ಣವಾಗಿ ರಾಜ್ಯ ಸರಕಾರ ಅಳವಡಿಸಿಕೊಂಡಿಲ್ಲ, ಆದರೆ ತನ್ನದೇ ಆದ ಸಮಗ್ರ ನಿಯಮಾವಳಿಗಳನ್ನು ರೂಪಿಸಿ ಅದನ್ನು ಆಧರಿಸಿ ಮಂಡಳಿ ಅಧ್ಯಕ್ಷರನ್ನು ನೇಮಿಸಲಾಗಿದೆ. ಆ ಬಗ್ಗೆ ವಿವಿಧ ರಾಜ್ಯಗಳಲ್ಲಿಏನೇನು ನಿಯಮಗಳಿವೆ ಎಂಬುದನ್ನು ಸಂಗ್ರಹಿಸಿ ಅವುಗಳನ್ನು ಸಲ್ಲಿಸಲು ಸ್ವಲ್ಪ ಕಾಲಾವಕಾಶ ನೀಡಬೇಕೆಂದು ಕೋರಿದರು.

ಈ ಹಿನ್ನೆಲೆಯಲ್ಲಿ ನ್ಯಾಯಾಲಯ,  ಸರಕಾರ ಮತ್ತು ಮಂಡಳಿಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಸಮಯಾವಕಾಶ ನೀಡಿ ವಿಚಾರಣೆಯನ್ನು ಮಾ.17ಕ್ಕೆ  ಮುಂದೂಡಿತು.

key words:  HC, seeking quashing, appointment of, pollution control board chairman, notice to govt

SUMMARY:

HC seeking quashing of appointment of pollution control board chairman, issues notice to govt

The court was hearing a petition challenging the appointment of MLA P M Narendraswamy as chairman of the Karnataka State Pollution Control Board (KSPCB) in violation of the Supreme Court guidelines.