ಶಿವಮೊಗ್ಗ,ಸೆಪ್ಟಂಬರ್,3,2021(www.justkannada.in): ನಾವು ಹಿಂದುತ್ವದ ಹೆಸರಲ್ಲಿ ಅಧಿಕಾರಕ್ಕೆ ಬಂದವರು: ಗಣೇಶ ಉತ್ಸವ ಮಾಡಿಯೇ ಮಾಡುತ್ತೇವೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ. ತಿಳಿಸಿದರು.
ಶಿವಮೊಗ್ಗದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಕೆ.ಎಸ್ ಈಶ್ವರಪ್ಪ, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರ ನಡೆಸುತ್ತಿದೆ. ನಾವು ಹಿಂದುತ್ವದ ಹೆಸರಿನಲ್ಲಿ ಅಧಿಕಾರಕ್ಕೆ ಬಂದವರು. ಗಣಪತಿ ಉತ್ಸವ ಯಶಸ್ವಿಯಾಗಿ ನಡೆಸಬೇಕು ಎನ್ನುವ ವಿಚಾರದಲ್ಲಿ ಯಾವ ಕಾರಣಕ್ಕೂ ಹಿಂದೆ ಸರಿಯುವುದಿಲ್ಲ ಹೇಳಿದರು.
ಸಾಮೂಹಿಕ ನಾಯಕತ್ವದಲ್ಲೇ ಮುಂದಿನ ಚುನಾವಣೆ ಎದುರಿಸುತ್ತೇವೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮುಂದಿನ ಚುನಾವಣೆ ಎದುರಿಸುತ್ತೇವೆ ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಸಚಿವ ಕೆ.ಎಸ್ ಈಶ್ವರಪ್ಪ, ಅಮಿತ್ ಶಾ ಯಾವ ರೀತಿ ಹೇಳಿದ್ದಾರೆ ಗೊತ್ತಿಲ್ಲ. ಸಾಮೂಹಿಕ ನಾಯಕತ್ವದ ಬಗ್ಗೆ ನಮ್ಮೆಲ್ಲರ ಒಲವಿದೆ. ಎಲ್ಲರೂ ಕೂತು ನಿರ್ಧಾರ ಮಾಡುತ್ತೇವೆ ಎಂದರು.
ಸಾಮೂಹಿಕ ನಾಯಕತ್ವದಲ್ಲಿ ಬೊಮ್ಮಾಯಿಯವರ ಪಾತ್ರವೂ ಇರುತ್ತದೆ. ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಸಂಘಟನೆ ಕಟ್ಟುತ್ತಿದ್ದಾರೆ. ಎಲ್ಲರೂ ಒಟ್ಟಿಗೆ ಸೇರಿಕೊಂಡು ಕೆಲಸ ಮಾಡುತ್ತಿದ್ದೇವೆ. ಏನೇ ಆದರೂ ಸಾಮೂಹಿಕ ನಾಯಕತ್ವದಲ್ಲೇ ಚುನಾವಣೆ ನಡೆಯುತ್ತದೆ ಎಂದರು.
ಜನಾಶೀರ್ವಾದ ಯಾತ್ರೆ ಸಂದರ್ಭದಲ್ಲಿ ಜನ ಸೇರಿದ್ದನ್ನು ನಾನು ಒಪ್ಪಲ್ಲ. ತುಂಬಾ ಸ್ಪಷ್ಟವಾಗಿ ಬಿಜೆಪಿಯ ಒಬ್ಬ ಮಂತ್ರಿಯಾಗಿ ಹೇಳು ಇಷ್ಟ ಪಡುತ್ತೇನೆ. ನಾನು ಒಪ್ಪಲ್ಲ ಎಂದರು.
Key words: power – name –Hindutva-Ganesha Utsav- Minister -KS Eshwarappa.